ಮಡಿಕೇರಿ, ಏ. ೬ : ಕುಶಾಲನಗರ ೨೨೦/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಭುವನಗಿರಿ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಿ ರುವುದರಿಂದ ತಾ. ೭ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು.
ಭುವನಗಿರಿ, ಯಡವನಾಡು, ಹುದುಗೂರು, ಸೀಗೆಹೊಸೂರು ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವೀರಾಜಪೇಟೆ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಅಮ್ಮತ್ತಿ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ತಾ. ೭ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರ ಬರಾಜು ಸ್ಥಗಿತಗೊಳಿಸಲಾಗುವುದು.
ಅಮ್ಮತ್ತಿ, ಕಾವಾಡಿ, ವಿನಾಯಕ ನಗರ, ಕೊಮ್ಮೆತ್ತೋಡು, ಬಳುಗುಂದ, ನಲ್ವತ್ತೋಕ್ಲು ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.