ಗೋಣಿಕೊಪ್ಪಲು, ಏ. ೬: ಕೊಡವ ಜನಾಂಗದ ವಿರುದ್ಧ ಅವಹೇಳನ ಮಾಡುತ್ತಿದ್ದಾರೆ ಎಂದು ಆರೋಪಿಸಿ ವೈ.ಕೆ. ಚೇತನ್ ವಿರುದ್ಧ ಕೊಡವಾಮೆರ ಕೊಂಡಾಟ ಸಂಘಟನೆ ಗೋಣಿಕೊಪ್ಪ ಪೊಲೀಸ್ ಠಾಣೆಗೆ ನೀಡಿದ ದೂರಿನ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಕೂಡಲೇ ಬಂಧಿಸಿ ಸೂಕ್ತ ತನಿಖೆ ನಡೆಸಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.
ಮಡಿಕೇರಿಯಲ್ಲಿ ದೂರು : ವೈ.ಕೆ. ಚೇತನ್ ವಿರುದ್ಧ ಮಡಿಕೇರಿ ನಗರ ಠಾಣೆಯಲ್ಲಿ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ದೂರು ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.