ಮಡಿಕೇರಿ, ಏ. ೬: ವೀರಾಜ ಪೇಟೆ ತಾಲೂಕಿನ ಅರುವತ್ತೊಕ್ಲು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ದುಡಿಯೋಣ ಬಾ ಅಭಿಯಾನಕ್ಕೆ ಗ್ರಾ.ಪಂ. ಅಧ್ಯಕ್ಷ ಎಂ.ಎನ್. ಸೋಮಣ್ಣ ಅವರು ಚಾಲನೆ ನೀಡಿದರು. ನಂತರ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವಲ್ಲಿ ಯಶಸ್ವಿ ಯಾಗಿ ಕಾರ್ಯನಿರ್ವಸುತ್ತಿದ್ದು, ಬೇಸಿಗೆಯ ಸಮಯವಾದ ಕಾರಣ ಜನರು ಉದ್ಯೋಗ ಅರಸಿ ವಲಸೆ ಹೋಗದೇ ಮನರೇಗಾ ಯೋಜನೆ ಯಲ್ಲಿ ಒಂದು ಕುಟುಂಬಕ್ಕೆ ೧೦೦ ದಿನ ಕೆಲಸ ನೀಡುವ ವ್ಯವಸ್ಥೆಯಿದ್ದು ಅದರ ಸದುಪಯೋಗ ಪಡೆದುಕೊಳ್ಳುವ ಸಲುವಾಗಿ ‘ದುಡಿಯೋಣ ಬಾ’ ಅಭಿಯಾನವು ಆರಂಭವಾಗಿದೆ ಎಂದು ತಿಳಿಸಿದರು. ಮನರೇಗಾದ ಸಹಾಯಕ ನಿರ್ದೇಶಕ ಶ್ರೀನಿವಾಸ್ ಅವರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳಿದ್ದು, ಅದರ ಸದುಪಯೋಗವನ್ನು ಪಡೆದು ಕೊಳ್ಳುವುದರಿಂದ ಕುಟುಂಬದ ಆರ್ಥಿಕ ಪರಿಸ್ಥಿತಿಯು ಸುಧಾರಿಸಿ ಕೊಳ್ಳಬಹುದು ಎಂದು ಹೇಳಿದರು.
ತಾಲೂಕು ಐಇಸಿ ಸಂಯೋಜಕ ರಾದ ನರೇಂದ್ರ ಮನರೇಗಾ ಯೋಜನೆಯ ಮಾಹಿತಿ ಇರುವ ಕರಪತ್ರಗಳನ್ನು ಹಾಗೂ ಪೋಸ್ಟರ್ ಗಳನ್ನು ವಿತರಿಸಿ, ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ನೀಡಿದರು. ಗ್ರಾ.ಪಂ. ಸದಸ್ಯ ಬೋಪಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರನಾರಾಯಣ, ಡಿಇಒ ರಮೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.