ಶನಿವಾರಸಂತೆ, ಏ. ೬: ಪಟ್ಟಣದ ಶ್ರೀ ರಾಮ ಮಂದಿರದ ಶ್ರೀ ಪಟ್ಟಾಭಿರಾಮ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ತಾ. ೧೦ ರಂದು ಬೆಳಿಗ್ಗೆ ೭ ಗಂಟೆಗೆ ವಿಶೇಷ ಪೂಜಾ ಕಾರ್ಯಕ್ರಮ, ಗಣಪತಿ ಹೋಮ, ನವಗ್ರಹ ಹೋಮ ಹಾಗೂ ರಾಮತಾರಕ ಹೋಮ ಏರ್ಪಡಿಸಲಾಗಿದೆ. ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ, ನಂತರ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೪ ಗಂಟೆಗೆ ಶ್ರೀ ರಾಮ ದೇವರ ಮೂರ್ತಿಯನ್ನು ಸೀತಾ, ಲಕ್ಷö್ಮಣ, ಆಂಜನೇಯ ದೇವರ ಮೂರ್ತಿಗಳ ಸಹಿತ ಭವ್ಯ ಮಂಟಪದಲ್ಲಿ ಸ್ಥಾಪಿಸಿ ಚಂಡೆ ವಾದ್ಯಗೋಷ್ಠಿಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುವುದು ಎಂದು ಮಂದಿರದ ಆಡಳಿತ ಮಂಡಳಿ ತಿಳಿಸಿದೆ.