ಆಂಧ್ರ ಪ್ರದೇಶದ ಎಲ್ಲಾ ೨೪ ಸಚಿವರು ರಾಜೀನಾಮೆ

ವಿಜಯವಾಡ, ಏ. ೭: ನಿರೀಕ್ಷಿಯಂತೆ ಆಂಧ್ರ ಪ್ರದೇಶದ ಎಲ್ಲಾ ೨೪ ಸಚಿವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಈ ಮೂಲಕ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಹೊಸ ಸಂಪುಟ ರಚನೆ ಮಾಡಲು ದಾರಿ ಮಾಡಿಕೊಟ್ಟಿದ್ದಾರೆ. ತಾ. ೧೧ ರಂದು ಹೊಸ ತಂಡ ಪ್ರಮಾಣವಚನ ಸ್ವೀಕರಿಸಲಿದೆ. ಜುಲೈ ೨೦೧೯ ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದ ಜಗನ್ ಮೋಹನ್ ರೆಡ್ಡಿ ಅವರು, ತಮ್ಮ ಐದು ವರ್ಷಗಳ ಅಧಿಕಾರಾವಧಿಯಲ್ಲಿ ಅರ್ಧ ಅವಧಿ ಪೂರೈಸಿದ ನಂತರ ಸಚಿವ ಸಂಪುಟವನ್ನು ಸಂಪೂರ್ಣ ಪುನರ್ರಚಿಸುವುದಾಗಿ ಈ ಹಿಂದೆ ಘೋಷಿಸಿದ್ದರು. ಆದರೆ ಸಂಪುಟ ಪುನರ್ರಚನೆಯು ಕೋವಿಡ್ ಸಾಂಕ್ರಾಮಿಕ ಮತ್ತು ಇತರ ಕಾರಣಗಳಿಂದ ಕೆಲವು ತಿಂಗಳು ವಿಳಂಬವಾಗಿ ನಡೆಯುತ್ತಿದೆ. ರಾಜೀನಾಮೆ ನೀಡಿರುವ ಸಚಿವರಲ್ಲಿ ಒಂದೆರಡು ಶಾಸಕರು ಮಾತ್ರ ಜಗನ್ ಮೋಹನ್ ರೆಡ್ಡಿ ಅವರ ಹೊಸ ತಂಡಕ್ಕೆ ಮತ್ತೆ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಜೀನಾಮೆ ನೀಡಿದವರಿಗೆ ಪಕ್ಷದ ಹುದ್ದೆಗಳನ್ನು ನೀಡಲಾಗುವುದು ಮತ್ತು ಜಿಲ್ಲಾ ಅಥವಾ ಪ್ರಾದೇಶಿಕ ಸಂಯೋಜಕರನ್ನಾಗಿ ಮಾಡಲಾಗುವುದು ಮತ್ತು ೨೦೨೪ರ ಚುನಾವಣೆಗೆ ಪಕ್ಷ ಸಂಘಟಿಸಲಾಗುವುದು ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಪಿ. ವಿಶ್ವರೂಪ್ ಹೇಳಿದ್ದಾರೆ.

ಬಿರ್‌ಭೂಮ್ ಹತ್ಯೆ ಪ್ರಕರಣ - ಆರೋಪಿ ಬಂಧನ

ಕೋಲ್ಕತ್ತಾ, ಮೇ. ೭: ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಂಟು ಜನರ ಹತ್ಯೆಗೆ ಸಂಬAಧಿಸಿದAತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮೊಲದ ಆರೋಪಿಯನ್ನು ಬಂಧಿಸಿದೆ. ಅಲ್ಲದೇ ಪ್ರಕರಣಕ್ಕೆ ಸಂಬAಧಿಸಿದAತೆ ಕೇಂದ್ರ ತನಿಖಾ ಸಂಸ್ಥೆಯು ಮುಂಬೈನ ನಾಲ್ವರು ಶಂಕಿತರನ್ನು ಬಂಧಿಸಿದೆ. ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಎಂಟು ಜನರ ಹತ್ಯೆಗೆ ಸಂಬAಧಿಸಿದAತೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವಂತೆ ಕೊಲ್ಕತ್ತಾ ಹೈಕೋರ್ಟ್ ನಿರ್ದೇಶಿಸಿದ ಬೆನ್ನಲ್ಲೇ ಸಿಬಿಐ ಪ್ರಕರಣಗಳನ್ನು ದಾಖಲಿಸಿತ್ತು. ಬೊಗ್ಟುಯಿ ಗ್ರಾಮದಲ್ಲಿ ಕೆಲವು ದುಷ್ಕರ್ಮಿಗಳು ಮಾರ್ಚ್ ೨೧ ರಂದು ೧೦ ಮನೆಗಳಿಗೆ ಬೆಂಕಿ ಹಚ್ಚಿ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಟ ಎಂಟು ಜನರನ್ನು ಕೊಂದಿದ್ದರು. ಕೊಲ್ಕತ್ತಾ ಹೈಕೋರ್ಟ್ ಶುಕ್ರವಾರ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸರಿಂದ ವಹಿಸಿಕೊಳ್ಳುವಂತೆ ಸಿಬಿಐಗೆ ನಿರ್ದೇಶಿಸಿತ್ತು ಮತ್ತು ಮುಂದಿನ ವಿಚಾರಣೆಯ ದಿನಾಂಕದೊಳಗೆ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿತ್ತು.

ಮೂವರು ಸಾಹಿತಿಗಳಿಗೆ ನಾಡೋಜ ಗೌರವ

ವಿಜಯನಗರ, ಏ. ೭: ಹಂಪಿ ಕನ್ನಡ ವಿಶ್ವ ವಿದ್ಯಾಲಯ ಪ್ರಸಕ್ತ ಸಾಲಿನ ನಾಡೋಜ ಪ್ರಶಸ್ತಿ ಪ್ರಕಟ ಮಾಡಿದ್ದು, ಸಾಹಿತಿಗಳಾದ ಗೊ.ರು. ಚನ್ನಬಸಪ್ಪ, ಭಾಷ್ಯಂ ಸ್ವಾಮಿ ಹಾಗೂ ಪ್ರೊ. ಟಿ.ವಿ. ವೆಂಕಟಾಚಲ ಶಾಸ್ತಿç ಅವರನ್ನು ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ಪ್ರಶಸ್ತಿ ಆಯ್ಕೆಗಾಗಿ ಒಟ್ಟು ಹತ್ತು ಜನರ ಹೆಸರನ್ನು ನಾಡೋಜಕ್ಕೆ ಶಿಫಾರಸು ಮಾಡಲಾಗಿತ್ತು. ಅಂತಿಮವಾಗಿ ರಾಜ್ಯಪಾಲರು ಮೂವರ ಹೆಸರಿಗೆ ಅಂಕಿತ ಹಾಕಿದ್ದಾರೆ ಎನ್ನಲಾಗಿದೆ. ಏಪ್ರಿಲ್ ೧೨ ರಂದು ಸಂಜೆ ೫.೩೦ಕ್ಕೆ ಕನ್ನಡ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮAದಿರದಲ್ಲಿ ನಡೆಯಲಿರುವ ನುಡಿಹಬ್ಬದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ನಾಡೋಜ ಪ್ರದಾನ ಮಾಡುವರು.

ಮಗನನ್ನು ಬೆಂಕಿ ಹಚ್ಚಿ ಕೊಂದ ಅಪ್ಪ

ಬೆಂಗಳೂರು, ಏ. ೭: ೧೨ ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ ಎಂದು ಹಾಡಹಗಲೇ ಮಗನನ್ನು ಬೆಂಕಿ ಹಚ್ಚಿ ಅಪ್ಪನೇ ಕೊಂದಿರುವ ಅಮಾನುಷ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ವಾರ ಈ ಘಟನೆ ನಡೆದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಆಜಾದ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಕಿ ಹಚ್ಚಿ ಕೊಂದ ಅಪ್ಪನನ್ನು ಸುರೇಂದ್ರ ಎಂದು ಗುರುತಿಸಲಾಗಿದ್ದು, ಮಗನನ್ನು ಅರ್ಪಿತ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ವಾರ ಅರ್ಪಿತ್ ೧೨ ಸಾವಿರ ರೂಪಾಯಿ ಕಳೆದುಕೊಂಡಿದ್ದರು. ಇದರಿಂದ ಕೋಪಗೊಂಡ ತಂದೆ ಸುರೇಂದ್ರ ಮನೆಯೊಳಗೆ ತಮ್ಮ ಮಗನ ಮೇಲೆ ಪೆಟ್ರೋಲ್ ಸುರಿದಿದ್ದಾರೆ. ತನ್ನ ಮಗನ ಮೇಲೆ ಬೆಂಕಿ ಕಡ್ಡಿ ಗೀರಿ ಎಸೆದಿದ್ದಾರೆ. ಮೊದಲನೇ ಬಾರಿ ಬೆಂಕಿ ಹೊತ್ತದ ಕಾರಣ, ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಿ ಎಸೆದಿದ್ದಾರೆ. ಬಳಿಕ ಅರ್ಪಿತ್ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿAದ ನಗರದ ತುಂಬೆಲ್ಲಾ ಓಡಾಡಿದ್ದಾರೆ. ಅರ್ಪಿತ್ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿAದ ದೇಹದ ಬಹುಪಾಲು ಭಾಗ ಸುಟ್ಟುಹೋಗಿತ್ತು. ಬಳಿಕ ಸ್ಥಳೀಯರು ಬೆಂಕಿ ನಂದಿಸಿ ಅರ್ಪಿತ್‌ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.