ಕುಶಾಲನಗರ, ಏ. ೭: ಕಾರ್ಮಿಕರು ಮತ್ತು ಬೀದಿಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದರು.
ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸ ಲಾಗಿದ್ದ ೫ನೇ ವರ್ಷದ ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಕಟ್ಟಕಡೆಯ ಜೀವನವನ್ನು ಸಾಗಿಸುತ್ತಿರುವ ಬೀದಿ ಬದಿ ವ್ಯಾಪಾರಿಗಳ ಮತ್ತು ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಹಲವು ಯೋಜನೆಗಳು ಜಾರಿಗೆ ಬಂದಿದೆ. ಸ್ಥಳೀಯ ಗ್ರಾಮ ಪಂಚಾಯಿತಿಯಿAದ ಹಿಡಿದು ಮಹಾನಗರಪಾಲಿಕೆ ತನಕ ಬೀದಿಬದಿ ವ್ಯಾಪಾರಿಗಳು ಮತ್ತು ಪೌರಕಾರ್ಮಿಕರ ಅಭಿವೃದ್ಧಿಯ ಕಡೆಗೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ತಮ್ಮ ವ್ಯಾಪಾರ ವಹಿವಾಟು ನಡೆಸುವ ಬೀದಿಬದಿ ವ್ಯಾಪಾರಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈಗಾಗಲೇ ಕೆಲವು ಬೇಡಿಕೆಗಳನ್ನು ಬೀದಿಬದಿ ವ್ಯಾಪಾರಿಗಳು ಮುಂದಿಟ್ಟಿದ್ದು ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂದು ರಂಜನ್ ಭರವಸೆ ವ್ಯಕ್ತಪಡಿಸಿದರು.
ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಸಿ.ಈ. ರಂಗಸ್ವಾಮಿ ಮಾತನಾಡಿ, ಬಹುತೇಕ ಬೀದಿಬದಿ ವ್ಯಾಪಾರಿಗಳು ಅನಕ್ಷರಸ್ಥರಾಗಿದ್ದು ಸರ್ಕಾರದ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ. ಸ್ಥಳೀಯ ಪಟ್ಟಣ, ಪಂಚಾಯಿತಿ ಮುಖ್ಯಾಧಿಕಾರಿ ಗಳು ಪ್ರತಿ ಬೀದಿಬದಿ ವ್ಯಾಪಾರಿಗಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್ ಮಾತನಾಡಿ. ಬೀದಿಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಜಾರಿಯಾಗಿರುವ ಎಲ್ಲಾ ಯೋಜನೆಗಳನ್ನು ಪ್ರಾಮಾಣಿಕವಾಗಿ ವ್ಯಾಪಾರಿಗಳಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಪಟ್ಟಣ ಪಂಚಾಯಿತಿ ಮೂಲಕ ನಿರಂತರ ಕಾರ್ಯ ಯೋಜನೆ ರೂಪಿಸಲಾಗಿದೆ ಬೀದಿಬದಿ ವ್ಯಾಪಾರಿ ನಿಧಿಯನ್ನು ಸ್ಥಾಪಿಸಿ ಸುಮಾರು ರೂ. ೨೦ ಲಕ್ಷಗಳನ್ನು ಬೀದಿಬದಿ ವ್ಯಾಪಾರಿಗಳಿಗಾಗಿ ಮೀಸಲಿಡುವುದಾಗಿ ತಿಳಿಸಿದರು.
ಕುಶಾಲನಗರ ಪಟ್ಟಣ ಕಾರ್ಯಕ್ರಮದಲ್ಲಿ ಪಂಚಾಯಿತಿಯ ಸುಮಾರು ೪೫ಕ್ಕೂ ಅಧಿಕ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಆರ್. ಜಗದೀಶ್, ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷೆ ಸೆಲೀನಾ 'ಡಿ' ಕುನ್ನಾ, ಬಿಜೆಪಿ ನಗರಾಧ್ಯಕ್ಷ ಉಮಾಶಂಕರ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪಾಂಡುರAಗ, ಎಂ.ಎನ್. ಕುಮಾರಪ್ಪ. ಒಕ್ಕೂಟದ ಜಿಲ್ಲಾ ಮಾಧ್ಯಮ ಸಲಹೆಗಾರ ಕೆ.ಟಿ. ಶ್ರೀನಿವಾಸ್, ಪ್ರಮುಖರಾದ ನಿರ್ಮಲಾ ಶಿವದಾಸ್, ಅಮೃತ, ಆದಮ್, ಭೀಮಣ್ಣ, ಮಣಿ, ಸತೀಶ್, ದಿನೇಶ್ ಸೇರಿದಂತೆ ಒಕ್ಕೂಟದ ರಾಜ್ಯ ಸಮಿತಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.