ಸೋಮವಾರಪೇಟೆ, ಏ. ೯: ತಾಲೂಕು ಗ್ರಾಮ ಸಹಾಯಕರ ಸಂಘದ ಸಭೆ ಆಡಳಿತ ಸೌಧದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಹೆಚ್.ಸಿ. ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಸಹಾಯಕರನ್ನು ಖಾಯಂಗೊಳಿಸುವ ಬೇಡಿಕೆ ಸರ್ಕಾರದ ಮಟ್ಟದಲ್ಲಿದ್ದು, ವಿಳಂಬವಾಗುತ್ತಿರುವ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಸಹಾಯಕರಿಗೆ ಕೆಲಸದ ಒತ್ತಡ ಜಾಸ್ತಿಯಾಗುತ್ತಿದ್ದು, ಈಗ ರೈತರ ಮನೆಗೆ ಕಂದಾಯ ದಾಖಲೆಗಳನ್ನು ತಲುಪಿಸುವ ಜವಾಬ್ದಾರಿಯನ್ನು ನೀಡಲಾಗಿದೆ. ವಾಹನಗಳಿಗೆ ಪೆಟ್ರೋಲ್ ಹಾಕಿಸಬೇಕಾದ ಅನಿವಾರ್ಯತೆ ಇದೆ. ಈ ಕಾರಣ ದಿಂದ ಆರ್ಥಿಕ ಸಮಸ್ಯೆಯಾಗುತ್ತಿದ್ದು, ಸರ್ಕಾರ ಸಂಬಳವನ್ನು ಹೆಚ್ಚು ಮಾಡಬೇಕು. ಈ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದು ಸುರೇಶ್ ಹೇಳಿದರು.

ಸಭೆಯಲ್ಲಿ ಕಾರ್ಯದರ್ಶಿ ಯಶೋಧ, ಉಪಾಧ್ಯಕ್ಷ ತುಂಗಪ್ಪ, ಖಜಾಂಚಿ ಶಶಿಕುಮಾರ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.