ಮಡಿಕೇರಿ, ಏ. ೯: ಆಲೂರು ಸಿದ್ದಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ, ಅಟಲ್ ಇನೋವೇಶನ್ ಮಿಶನ್ ವತಿಯಿಂದ ಸ್ಥಾಪಿಸಲಾದ ಪ್ರಯೋಗಾಲಯದ ಉದ್ಘಾಟನೆ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಡಯೆಟ್ ಪ್ರಾಂಶುಪಾಲರೂ, ಉಪನಿರ್ದೇಶಕ ರಂಗಸ್ವಾಮಿ, ಡಯೆಟ್ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ವಿ., ಆಲೂರು ಸಿದ್ದಾಪುರ ಪಂಚಾಯಿತಿ ಪಿಡಿಓ ಮತ್ತು ಸದಸ್ಯರು, ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಪ್ರಕಾಶ್, ಗೋಣಿಮರೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಚಿನ್ನಪ್ಪ, ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಭಾರತಿ ಕೆ.ಆರ್. ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.