ಮಡಿಕೇರಿ, ಏ. ೮: ರೋಟರಿ ಮಡಿಕೇರಿ ವತಿಯಿಂದ ನಗರದಲ್ಲಿ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು.

ನಗರದ ರೋಟರಿ ಸಭಾಂಗಣ ದಲ್ಲಿ ರೋಟರಿ ಅಧ್ಯಕ್ಷ ಎನ್.ಡಿ. ಅಚ್ಚಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಕಳೆದ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ಶ್ರುಶ್ರೂಷಕಿ ಎಂ.ಎನ್. ಮಮತ, ಕೋವಿಡ್ ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಕೆ.ಬಿ. ಕುಸುಮಾ ಹಾಗೂ ಕಳೆದ ೨೧ ವರ್ಷಗಳಿಂದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಪಿ.ಎಸ್. ಹನಿತಾ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಅಧ್ಯಕ್ಷ ಎನ್.ಡಿ.ಅಚ್ಚಯ್ಯ ಮಾತನಾಡಿ ಮಹಿಳೆಯರು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ವೆಂದರು. ಕಾರ್ಯಕ್ರಮದಲ್ಲಿ ರೋಟರಿ ವಿವಿಧ ಘಟಕಗಳ ರೋಟೆರಿಯನ್‌ಗಳು ಉಪಸ್ಥಿತರಿದ್ದರು.