ಕುಶಾಲನಗರ, ಏ. ೯: ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲಭೂತ ಉದ್ದೇಶವಾಗಿದೆ ಎಂದು ತಾಲೂಕು ತಹಶೀಲ್ದಾರ್ ಪ್ರಕಾಶ್ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸ್ಮಶಾನ ಭೂಮಿ ಕಲ್ಪಿಸಲು ಸರ್ಕಾರ ನಿಯಮ ರೂಪಿಸಿದ್ದು, ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಕಲ್ಪಿಸಿದೆ. ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂಕಂದಾಯ ಕಾಯ್ದೆ ೧೯೬೪ ಕಲಂ ೭೧ ರೈ ಅನ್ವಯ ಜಿಲ್ಲಾಧಿಕಾರಿಗಳು ಸ್ಮಶಾನ ಉದ್ದೇಶಕ್ಕಾಗಿ ಕಾಯ್ದಿರಿಸಲು ಅಧಿಕಾರ ಹೊಂದಿದ್ದಾರೆ.

ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಅಧಿಕಾರಿಗಳು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕೆ ಕಾಯ್ದಿರಿಸುವ ಸಂಬAಧ ಕ್ರಮಕೈಗೊಳ್ಳಲಾಗುವುದು. ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸುವ ಅಧಿಕಾರವನ್ನು ಸರ್ಕಾರ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಲು ಅವರು ತಿಳಿಸಿದ್ದಾರೆ.

ಸರ್ಕಾರಿ ಜಮೀನು, ಕೆರೆ-ಕಟ್ಟೆ,ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಮೂಲಗಳಿಂದ ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ ಬೀದಿ ಬಂಡಿ, ದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಎಲ್ಲಾ ಸರ್ಕಾರಿ ಜಮೀನು ಒತ್ತುವರಿ ಆಗಿದ್ದಲ್ಲಿ ಸಾರ್ವಜನಿಕರು ಸಂಬAಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಾಲೂಕು ತಹಶೀಲ್ದಾರ್ ಅವರುಗಳಿಗೆ ದೂರು ನೀಡಲು ತಾಲೂಕು ಕಚೇರಿಯ ಪ್ರಕಟಣೆಯ ಮೂಲಕ ಕೋರಿದ್ದಾರೆ.