ಮಡಿಕೇರಿ, ಏ. ೮ : ಬೆಂಗಳೂರಿನ ಜೆ.ಜೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ಅವರುಗಳು ನೀಡಿರುವ ಹೇಳಿಕೆಯನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುವ ರೀತಿಯ ಹೇಳಿಕೆಯನ್ನು ಸಚಿವರು ಹಾಗೂ ಬಿಜೆಪಿ ಮುಖಂಡರು ನೀಡಿದ್ದಾರೆ ಎಂದು ಆರೋಪಿಸಿ, ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಿ.ಟಿ.ರವಿ ಅವರು ನೀಡಿರುವ ಹೇಳಿಕೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ರಾಜಕೀಯ ಲಾಭಕ್ಕಾಗಿ ಸಮಾಜದ ಶಾಂತಿ, ಸೌಹಾರ್ದತೆಗೆ ಭಂಗ ತರುವ ರೀತಿ ನೀಡಿರುವ ಹೇಳಿಕೆ ಸರಿಯಲ್ಲ ಎಂದರು.
ಕೆಪಿಸಿಸಿ ಪದಾಧಿಕಾರಿಗಳಾದ ಕೆ.ಪಿ.ಚಂದ್ರಕಲಾ, ಟಿ.ಪಿ.ರಮೇಶ್, ಡಿಸಿಸಿ ಉಪಾಧ್ಯಕ್ಷ ಕೆ.ಬಿ.ಸುಜಾ ತಿಮ್ಮಯ್ಯ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಮಾಜಿ ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನೀರಾ ಮೈನಾ, ಎನ್.ಎಸ್.ಯು.ಐ ಅಧ್ಯಕ್ಷ ಕೆ.ಜಿ.ರೋಷನ್, ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ನಗರ ಕಾಂಗ್ರೆಸ್ ಉಪಾಧ್ಯಕ್ಷ ಯಾಕೂಬ್ ಮತ್ತಿತರರು ಪಾಲ್ಗೊಂಡಿದ್ದರು.