ಸೋಮವಾರಪೇಟೆ, ಏ. ೮: ಪಟ್ಟಣದ ಸಹಕಾರ ಸಂಘದ ಖಾಸಗಿ ಕಟ್ಟಡದಲ್ಲಿ ಕಳೆದ ಕೆಲ ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ತಾಲೂಕು ಕಚೇರಿ ಸಂಕೀರ್ಣದ ಆಡಳಿತ ಸೌಧ ಕಟ್ಟಡಕ್ಕೆ ಸ್ಥಳಾಂತರಿಸುವAತೆ ರಾಜ್ಯ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇಲ್ಲಿನ ತಾಲೂಕು ಕಚೇರಿ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿದ್ದ ನೋಂದಣಾಧಿಕಾರಿಗಳ ಕಚೇರಿಯು ಕಳೆದ ಕೆಲ ವರ್ಷಗಳಿಂದ ಖಾಸಗಿ ಕಟ್ಟಡಕ್ಕೆ ಸ್ಥಳಾಂತರಗೊAಡು ಮಾಸಿಕ ೨೯ ಸಾವಿರ ರೂಪಾಯಿ ಬಾಡಿಗೆ ಆಧಾರದಲ್ಲಿ ಕಾರ್ಯಚರಿಸುತ್ತಿತ್ತು. ತಾಲೂಕು ಕಚೇರಿ ಕಟ್ಟಡ ಶಿಥಿಲಾವಸ್ಥೆಗೆ ತಲುಪಿ, ಮಳೆಗಾಲದಲ್ಲಿ ನೀರು ಸೋರಿಕೆಯಾಗುತ್ತಿದ್ದರಿಂದ ಕಡತಗಳ ರಕ್ಷಣೆಗೆ ಈ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ತಾಲೂಕು ಕಚೇರಿ ಕಟ್ಟಡವನ್ನು ಮಳೆಹಾನಿ ಪರಿಹಾರ ನಿಧಿಯಡಿ ಒಂದೂವರೆ ಕೋಟಿ ವೆಚ್ಚದಲ್ಲಿ ನವೀಕರಿಸಿದ್ದು, ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವAತೆ ಕಾಫಿ ಬೆಳೆಗಾರರ ಹೋರಾಟ ಸಮಿತಿ ಸೇರಿದಂತೆ ಇತರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ‘ಶಕ್ತಿ’ಯಲ್ಲೂ ವರದಿ ಪ್ರಕಟವಾಗಿತ್ತು.

ಇದೀಗ ಜಿಲ್ಲಾ ನೋಂದಣಾಧಿಕಾರಿಗಳು, ತಾಲೂಕು ಉಪ ನೋಂದಣಾಧಿಕಾರಿಗಳಿಗೆ ಜ್ಞಾಪನಾ ಪತ್ರ ನೀಡಿರುವ ರಾಜ್ಯ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಇಲಾಖೆಯ ಆಯುಕ್ತರು, ತಕ್ಷಣ ಸೋಮವಾರಪೇಟೆ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಖಾಸಗಿ ಕಟ್ಟಡದಿಂದ ತಾಲೂಕು ಆಡಳಿತ ಸೌಧದ ಕಟ್ಟಡಕ್ಕೆ ಸ್ಥಳಾಂತರಿಸುವAತೆ ಆದೇಶಿಸಿದ್ದಾರೆ.