೧೮ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್

ನವದೆಹಲಿ, ಏ. ೮: ತಾ. ೧೦ ರಿಂದ ೧೮ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ. ದೇಶದಲ್ಲಿ ಕೋವಿಡ್-೧೯ ಎಕ್ಸ್ಇ ನೂತನ ರೂಪಾಂತರ ಸೋಂಕಿನ ಮಾತು ಕೇಳಿಬರುತ್ತಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಕೋವಿಡ್-೧೯ ವಿರುದ್ಧ ಮುನ್ನೆಚ್ಚರಿಕಾ ಬೂಸ್ಟರ್ ಡೋಸ್ ನೀಡಿಕೆಗೆ ಮುಂದಾಗಿದೆ. ೧೮ ವರ್ಷ ಮೇಲ್ಪಟ್ಟ ಜನಸಂಖ್ಯೆಯ ಗುಂಪಿಗೆ ತಾ. ೧೦ ರಿಂದ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಮುನ್ನೆಚ್ಚರಿಕೆಯ ಡೋಸ್‌ಗಳನ್ನು ಪ್ರಪಂಚದಾದ್ಯAತ ಬೂಸ್ಟರ್ ಡೋಸ್ ಎಂದು ಕರೆಯಲಾಗುತ್ತದೆ. ಈ ಹಿಂದೆ ವೈದ್ಯಕೀಯ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ನೀಡಲಾಗಿತ್ತು. ಇದೀಗ ೧೮ ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು, ಆ ಮೂಲಕ ೬೦ ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೂಸ್ಟರ್ ಕೋವಿಡ್ ಲಸಿಕೆಯನ್ನು ನೀಡದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಈ ಹಿಂದೆ ಕೇಂದ್ರ ಸರ್ಕಾರ ಮುಂಚೂಣಿಯ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ವಯಸ್ಸಿನ ಹೊರತಾಗಿಯೂ ಬೂಸ್ಟರ್ ಡೋಸ್‌ಗಳನ್ನು ಅನುಮತಿಸಿತ್ತು. Wಊಔ ಮತ್ತು ಪ್ರಪಂಚದಾದ್ಯAತದ ವೈರಾಲಜಿಸ್ಟ್ಗಳು ಸಾವುಗಳು ಮತ್ತು ಕೋವಿಡ್-ಸಂಬAಧಿತ ಆರೋಗ್ಯ ತೊಡಕುಗಳನ್ನು ಕಡಿಮೆ ಮಾಡಲು ಬೂಸ್ಟರ್ ಡೋಸ್‌ಗಳನ್ನು ಶಿಫಾರಸು ಮಾಡಿದ್ದಾರೆ. ಅದಕ್ಕೆ ಪೂರಕವಾಗಿ ಈಗಾಗಲೇ ಹಲವಾರು ದೇಶಗಳು ವಾಸ್ತವವಾಗಿ ನಾಲ್ಕನೇ ಡೋಸ್ ಕೋವಿಡ್ ಲಸಿಕೆಯನ್ನು ನೀಡಲು ಪ್ರಾರಂಭಿಸಿವೆ. ಈ ಬೂಸ್ಟರ್ ಡೋಸ್‌ಗಳು ಸಾಮಾನ್ಯವಾಗಿ ನಾಲ್ಕರಿಂದ ಆರು ತಿಂಗಳವರೆಗೆ ಪರಿಣಾಮಕಾರಿಯಾಗಿರುತ್ತವೆ. ಇದು ಕೋವಿಡ್ ಸೋಂಕಿನ ವಿರುದ್ಧ ಮೇಲುಗೈ ಸಾಧಿಸಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲೆಗಳಲ್ಲಿ ಬಾಂಬ್ - ಅನಾಮಿಕ ಬೆದರಿಕೆ

ಬೆಂಗಳೂರು, ಏ. ೮: ರಾಜ್ಯಾದ್ಯಂತ ಧರ್ಮ ಸಂಘರ್ಷಣೆ ನಡುವೆಯೇ ರಾಜಧಾನಿ ಬೆಂಗಳೂರು ನಾಗರಿಕರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿ ಶುಕ್ರವಾರ ಹೊರಬಿದ್ದಿದೆ. ಬೆಂಗಳೂರಿನ ಏಳು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಖುದ್ದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ ಶಾಲೆಗಳನ್ನು ಗುರಿಯಾಗಿಟ್ಟುಕೊಂಡು ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇಮೇಲ್ ಬಂದಿದ್ದು, ಪೊಲೀಸರು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ. ಇಮೇಲ್ ಆಧರಿಸಿ ಖಾಸಗಿ ಶಾಲೆಗಳಿಗೆ ಬಾಂಬ್ ಸ್ಕಾ÷್ವಡ್, ಶ್ವಾನ ದಳ ಮೂಲಕ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಶಾಲೆಗಳಿಂದ ಸಿಬ್ಬಂದಿಗಳನ್ನು, ಬೇಸಿಗೆ ಶಿಬಿರ, ಪರೀಕ್ಷೆ ಬರೆಯುವುದರಲ್ಲಿ ನಿರತರಾಗಿದ್ದ ಮಕ್ಕಳನ್ನು ಹೊರಗೆ ಕಳುಹಿಸಲಾಗಿದೆ ಎಂದು ಕಮಲ್ ಪಂತ್ ಮಾಹಿತಿ ನೀಡಿದ್ದಾರೆ. ಇದುವರೆಗೆ ಶಾಲೆಗಳಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ, ಸುಳಿವು ಸಿಕ್ಕಿಲ್ಲ, ಹಾಗೆಂದು ಈ ವಿಷಯದಲ್ಲಿ ನಿರ್ಲಕ್ಷö್ಯ ಮಾಡುವಂತಿಲ್ಲ ಎಂದಿದ್ದಾರೆ. ಮಹದೇವಪುರ ಸಮೀಪದ ಹೂಡಿಯಲ್ಲಿರುವ ಗೋಪಾಲನ್ ಇಂಟರ್‌ನ್ಯಾಶನಲ್ ಸ್ಕೂಲ್, ವರ್ತೂರಿನ ಸೂಲಿಕುಂಟೆಯ ದೆಹಲಿ ಪಬ್ಲಿಕ್ ಸ್ಕೂಲ್, ಹೆಣ್ಣೂರಿನ ಸೇಂಟ್ ವಿನ್ಸೆಂಟ್ ಪಲ್ಲೊಟ್ಟಿ ಶಾಲೆ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಗೋವಿಂದಪುರದ ನ್ಯೂ ಇಂಡಿಯನ್ ಪಬ್ಲಿಕ್ ಸ್ಕೂಲ್‌ಗೆ ಬೆದರಿಕೆ ಇಮೇಲ್‌ಗಳು ಬಂದಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಸ್ಕೂರಿನ ಎಬಿನೇಜರ್ ಇಂಟರ್‌ನ್ಯಾಶನಲ್ ಸ್ಕೂಲ್, ಬೇಗೂರು-ಕೊಪ್ಪ ರಸ್ತೆಯಲ್ಲಿರುವ ರೆಡ್‌ಬ್ರಿಡ್ಜ್ ಇಂಟರ್‌ನ್ಯಾಶನಲ್ ಅಕಾಡೆಮಿ ಮತ್ತು ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಕೊಪ್ಪ ರಸ್ತೆಯಲ್ಲಿರುವ ಕ್ಯಾಂಡರ್ ಇಂಟರ್‌ನ್ಯಾಶನಲ್ ಸ್ಕೂಲ್ ಆಡಳಿತಕ್ಕೂ ಇದೇ ರೀತಿಯ ಇಮೇಲ್‌ಗಳನ್ನು ಕಳುಹಿಸಲಾಗಿದೆ. ಮಲಿಂದ ಬೊರೊನ್ ಇ-ಮೇಲ್ ಅಕೌಂಟ್‌ನಿAದ ಇ-ಮೇಲ್ ಬಂದಿದ್ದು ‘ದಿಸ್ ಇಸ್ ನಾಟ್ ಜೋಕ್’ ಎಂದು ಎಚ್ಚರಿಸಿದೆ.

ಡಕ್ಟೆಡ್ ರಾಮ್‌ಜೆಟ್ ಕ್ಷಿಪಣಿ ಯಶಸ್ವಿ ಉಡಾವಣೆ

ಭುವನೇಶ್ವರ, ಏ. ೮: ಘನ ಇಂಧನ ಸಾಮರ್ಥ್ಯದ ಡಕ್ಟೆಡ್ ರಾಮ್‌ಜೆಟ್ ಕ್ಷಿಪಣಿ ವ್ಯವಸ್ಥೆಯನ್ನು ಶುಕ್ರವಾರ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್‌ಡಿಒ) ಯಶಸ್ವಿ ಉಡಾವಣೆ ಮಾಡಿದೆ. ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ಶುಕ್ರವಾರ ಒಡಿಶಾ ಕರಾವಳಿಯ ಚಂಡೀಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್(ಐಟಿಆರ್)ನಿAದ ಘನ ಇಂಧನ ಡಕ್ಟೆಡ್ ರಾಮ್‌ಜೆಟ್ (ಎಸ್‌ಎಫ್‌ಡಿಆರ್) ಕ್ಷಿಪಣಿ ವ್ಯವಸ್ಥೆಯನ್ನು ಬೂಸ್ಟರ್‌ನ ಹಾರಾಟದ ಪ್ರಯೋಗವನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಬಗ್ಗೆ ಸಂತಸ ಹಂಚಿಕೊAಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಯಶಸ್ವಿ ಪ್ರಯೋಗಕ್ಕಾಗಿ ಅಭಿನಂದಿಸಿದರು ಮತ್ತು ಇದು ದೇಶದಲ್ಲಿ ನಿರ್ಣಾಯಕ ಕ್ಷಿಪಣಿ ತಂತ್ರಜ್ಞಾನಗಳ ಅಭಿವೃದ್ಧಿಗೆ ಪ್ರಮುಖ ಮೈಲಿಗಲ್ಲು ಇದಾಗಿದೆ ಎಂದು ಹೇಳಿದರು.

ಹಫೀಜ್ ಸಯೀದ್‌ಗೆ ೩೧ ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್, ಏ. ೮: ೨೬/೧೧ರ ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ೩೧ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮಾಅತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ಅವರ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ. ಹಫೀಜ್ ಸಯೀದ್ ನಿರ್ಮಿಸಿದ ಎಂದು ಹೇಳಲಾದ ಮಸೀದಿ ಮತ್ತು ಮದರಸಾ ಸೇರಿದಂತೆ ಸಯೀದ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸೂಚಿಸಲಾಗಿದೆ. ಮುಂಬೈ ದಾಳಿ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ಗೆ ೩ ಲಕ್ಷದ ೪೦ ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ೨೦೨೦ ರಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಹಫೀಜ್ ಸಯೀದ್‌ಗೆ ೧೫ ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ಎ.ಸಿ. ಸ್ಫೋಟಿಸಿ ನಾಲ್ವರು ಸಜೀವ ದಹನ

ವಿಜಯನಗರ, ಏ. ೮: ಎಸಿ ಸ್ಫೋಟಗೊಂಡು ಇಬ್ಬರು ಮಕ್ಕಳ ಸಹಿತ ದಂಪತಿ ಸಜೀವ ದಹನವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ. ಮೃತ ದಂಪತಿಯನ್ನು ೪೨ ವರ್ಷದ ವೆಂಕಟ್ ಪ್ರಶಾಂತ್, ೩೮ ವರ್ಷದ ಡಿ. ಚಂದ್ರಕಲಾ, ಮಕ್ಕಳಾದ ೧೬ ವರ್ಷದ ಹೆಚ್.ಎ. ಅರ್ದ್ವಿಕ್ ಮತ್ತು ೮ ವರ್ಷದ ಬಾಲಕಿ ಪ್ರೇರಣ ಎಂದು ಗುರುತಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಎಸಿಯಲ್ಲಿ ಸೋರಿಕೆಯೊಗಿ ಈ ಘೋರ ಸ್ಫೋಟ ಸಂಭವಿಸಿದೆ. ತಡರಾತ್ರಿ ಹೊತ್ತು ನಿದ್ದೆ ಮಾಡುತ್ತಿದ್ದ ವೇಳೆ ಎಸಿ ಸ್ಫೋಟಗೊಂಡು ಬೆಂಕಿ ಧಗಧಗನೆ ಹೊತ್ತಿ ಉರಿದು ಇಡೀ ಮನೆ ಆವರಿಸಿದ್ದರಿಂದ ದಂಪತಿ ಮತ್ತು ಮಕ್ಕಳು ಹೊರಬರಲಾಗದೆ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮರಿಯಮ್ಮನಹಳ್ಳಿಯ ರಾಘವೇಂದ್ರ ಶೆಟ್ಟಿ ಎಂಬುವವರ ಮನೆಯಲ್ಲಿ ರಾತ್ರಿ ಹೊತ್ತು ಮಲಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮರಿಯಮ್ಮನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತುರ್ತು ಭೂಸ್ಪರ್ಶದ ಸಂದರ್ಭ ತುಂಡಾದ ವಿಮಾನ

ಸ್ಯಾನ್‌ಜೋಸ್, ಏ. ೮: ತುರ್ತು ಭೂಸ್ಪರ್ಶದ ಸಮಯದಲ್ಲಿ ಸರಕು ವಿಮಾನವೊಂದು ಪೈಲಟ್ ನಿಯಂತ್ರಣ ತಪ್ಪಿ ಎರಡು ತುಂಡಾಗಿರುವ ಘಟನೆ ಕೋಸ್ಟರಿಕಾದ ಸ್ಯಾನ್ ಜೋಸ್ ಅಂರ‍್ರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಜರ್ಮನ್ ಲಾಜಿಸ್ಟಿಕ್ಸ್ ದೈತ್ಯ ಸಂಸ್ಥೆ ಡಿಹೆಚ್‌ಎಲ್‌ಗೆ ಸೇರಿದ ವಿಮಾನದಿಂದ ಹೊಗೆ ಹೊರಹೊಮ್ಮುತ್ತಿತ್ತು, ವಿಮಾನ ರನ್‌ವೇಯಲ್ಲಿ ಇಳಿಯುವಾಗ ಪಕ್ಕಕ್ಕೆ ಸರಿದು ಎರಡು ತುಂಡಾಗಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕೋಸ್ಟರಿಕಾದ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ಅಪಘಾತದಿಂದಾಗಿ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿತ್ತು.