ಪೊನ್ನಂಪೇಟೆ, ಏ. ೯: ಕಳೆದ ೫ ದಿನಗಳಿಂದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಹುದ್ದೆಗೆ ಬಿಎಸ್ಸಿ ಅರಣ್ಯಶಾಸ್ತç ಪದವೀಧರರಿಗೆ ನೀಡಿದ್ದ ಶೇಕಡಾ ೭೫ ರಷ್ಟು ಮೀಸಲಾತಿಯನ್ನು ಕಡಿತಗೊಳಿಸಿ ಶೇಕಡ ೫೦ಕ್ಕೆ ಇಳಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಆವರಣದಲ್ಲಿ ಪೊನ್ನಂಪೇಟೆ ಕರ್ನಾಟಕ ಅರಣ್ಯ ಪದವೀಧರರ ಮತ್ತು ವಿದ್ಯಾರ್ಥಿಗಳ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಕೊನೆಗೊಂಡಿದೆ.

ಮಡಿಕೇರಿಯಲ್ಲಿನ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಉಮೇಶ್ ಕತ್ತಿ ಅವರೊಂದಿಗೆ ಅರಣ್ಯ ಇಲಾಖೆಯ ಹುದ್ದೆಗಳಲ್ಲಿ ಅರಣ್ಯ ಶಾಸ್ತç ಪದವೀಧರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಚರ್ಚೆ ನಡೆಸಿದರು. ವಿದ್ಯಾರ್ಥಿಗಳ ಅಳಲನ್ನು ಆಲಿಸಿದ ಸಚಿವರು ಈ ಬಗ್ಗೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ಚರ್ಚಿಸಿ ನ್ಯಾಯಯುತವಾದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು ಹಾಗೂ ಅಲ್ಲಿಯವರೆಗೆ ಪ್ರತಿಭಟನೆಯನ್ನು ಹಿಂಪಡೆಯುವAತೆ ಕೇಳಿಕೊಂಡ ಹಿನ್ನೆಲೆ ಯಲ್ಲಿ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದೇ ಇದ್ದಲ್ಲಿ ಮತ್ತೆ ಹೋರಾಟವನ್ನು ಮುಂದುವರಿಸ ಲಾಗುವುದು ಎಂದು ವಿದ್ಯಾರ್ಥಿಗಳು ಶಕ್ತಿಯೊಂದಿಗೆ ಮಾಹಿತಿ ನೀಡಿದ್ದಾರೆ.