ಸುಂಟಿಕೊಪ್ಪ, ಏ. ೮: ಕೆದಕಲ್ ರಾಷ್ಟಿçÃಯ ಹೆದ್ದಾರಿ ಬಳಿ ಗ್ಯಾಸ್ ಲಾರಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸಿನ ನಡುವೆ ಡಿಕ್ಕಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆೆ.
ರಾಷ್ಟಿçÃಯ ಹೆದ್ದಾರಿ ಬಳಿಯಲ್ಲಿ ಕೆದಕಲ್ ಅಂಚೆ ಕಚೇರಿಯ ಸಮೀಪದ ಬಸ್ ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸಿ ಹೊರಡುವ ಸಂದರ್ಭ ಬಸ್‌ಗೆ ಮೈಸೂರಿನಿಂದ ಮಂಗಳೂರಿಗೆ ವೇಗವಾಗಿ ಹೋಗುತ್ತಿದ್ದ ಗೂಡ್ಸ್ ಕ್ಯಾರಿಯರ್ ಭಾರತ್ ಪೆಟ್ರೋಲಿಯಂ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿಯೊಂದು ಬಸ್‌ನ ಹಿಂಬದಿಗೆ ಡಿಕ್ಕಿಪಡಿಸಿದ ಪರಿಣಾಮ ಬಸ್ ರಸ್ತೆ ಬದಿಯ ತೋಟಕ್ಕೆ ನುಗ್ಗಿದ್ದು ಬಸ್‌ನ ಹಿಂಭಾಗ ಹಾಗೂ ಲಾರಿಯ ಮುಂಭಾಗ ಜಖಂಗೊAಡಿದೆ. ಬಸ್ ಚಾಲಕ ಎಂ.ಎ. ಮುಲ್ಲಾ ಎಂಬವರ ತಲೆಗೆ ಗಾಯವಾದ ಪರಿಣಾಮ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಎಎಸ್‌ಐ ಶ್ರೀನಿವಾಸ್ ಹಾಗೂ ಸಿಬ್ಬಂದಿ ತೆರಳಿ ಸ್ಥಳ ಪರಿಶೀಲನೆ ನಡೆಸಿ ಲಾರಿಯನ್ನು ಹಾಗೂ ಚಾಲಕನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆÉ.