ಸೋಮವಾರಪೇಟೆ, ಏ. ೯: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ. ಶ್ರೀಕಾಂತ್ ಹಾಗೂ ಉಪಾಧ್ಯಕ್ಷರಾಗಿ ಮಹೇಶ್ ತಿಮ್ಮಯ್ಯ ಅವರುಗಳು ಅವಿರೋಧವಾಗಿ ಆಯ್ಕೆಯಾದರು. ಸಂಘದ ಸಭಾಂಗಣದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಸಾಲಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಿಸಲಾಯಿತು. ಈ ಸಂದರ್ಭ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.