ಸೋಮವಾರಪೇಟೆ, ಏ. ೮: ವೀರಶೈವ ಲಿಂಗಾಯತರನ್ನೆಲ್ಲಾ ಹಿಂದುಳಿದ ವರ್ಗ ೨ ಆ ಗೆ ಸೇರಿಸಬೇಕೆಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ ೨ಎ ಗೆ ಸೇರಿಸಬೇಕೆಂಬ ಬೇಡಿಕೆಯನ್ವಯ ಸರ್ಕಾರದ ಆದೇಶದಂತೆ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ನೇತೃತ್ವದ ತಂಡವನ್ನು ಭೇಟಿ ಮಾಡಿದ ಸಂಘಟನೆಯ ಪ್ರಮುಖರು ಈ ಬಗ್ಗೆ ಮನವಿ ಸಲ್ಲಿಸಿದರು.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಎಸ್. ಮಹೇಶ್ ನೇತೃತ್ವದ ತಂಡ ಆಯೋಗದ ಪ್ರಮುಖರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಕೊಡಗು ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಒಂದೇ ಎಂಬ ಭಾವನೆಯಿಂದ ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ. ಆದರೆ ಮೀಸಲಾತಿಯ ನೆಪದಲ್ಲಿ ಸಮುದಾಯವನ್ನು ಒಡೆಯುವುದು ಬೇಡ. ಮೀಸಲಾತಿ ಕಲ್ಪಿಸುವುದಾದರೆ ವೀರಶೈವ ಲಿಂಗಾಯತ ಸಮುದಾಯ ದವರಿಗೆಲ್ಲಾ ಅನುಕೂಲವಾಗುವಂತೆ ಅವಕಾಶ ಮಾಡಿಕೊಡಬೇಕೆಂದು ಆಯೋಗಕ್ಕೆ ಮನವರಿಕೆ ಮಾಡಿದರು.

ಮನವಿ ಸ್ವೀಕರಿಸಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷ ಎ.ಎಸ್. ಮಲ್ಲೇಶ್, ಕಾರ್ಯದರ್ಶಿ ಗಿರೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಷಾರಾಣಿ, ಗೌರವಾಧ್ಯಕ್ಷೆ ಭುವನೇಶ್ವರಿ, ಉಪಾಧ್ಯಕ್ಷೆ ಭಗವತಿ, ಕಾರ್ಯದರ್ಶಿ ಗೀತಾ ರಾಜು, ಸರಿತಾ, ತಾಲೂಕು ಘಟಕದ ಅಧ್ಯಕ್ಷ ಜಿ.ಬಿ. ಜಯರಾಜ್, ವೀರಶೈವ ಮಹಾಸಭಾದ ಯುವಘಟಕದ ತಾಲೂಕು ಅಧ್ಯಕ್ಷ ಆದರ್ಶ್, ಪದಾಧಿಕಾರಿಗಳಾದ ಪ್ರೇಂನಾಥ್, ಲಿಖಿತ್, ಜೀವನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.