ಸೋಮವಾರಪೇಟೆ, ಏ. ೮: ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸವಲತ್ತು ಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದರು.

ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಶಾಸಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಗಿರಿಜನರಿಗೆ ಲ್ಯಾಂಪ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಾಜದ ಎಲ್ಲಾ ವರ್ಗದ ಜನರ ಅಭ್ಯುದಯಕ್ಕಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿವೆ. ಇವುಗಳ ಆಶಯ ಈಡೇರಬೇಕಾದರೆ ಅರ್ಹರಿಗೆ ಸೌಲಭ್ಯ ತಲುಪಬೇಕು. ಈ ನಿಟ್ಟಿನಲ್ಲಿ ಸೋಮವಾರಪೇಟೆ, ಏ. ೮: ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸವಲತ್ತು ಗಳನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದರು.

ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಶಾಸಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಗಿರಿಜನರಿಗೆ ಲ್ಯಾಂಪ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಾಜದ ಎಲ್ಲಾ ವರ್ಗದ ಜನರ ಅಭ್ಯುದಯಕ್ಕಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿವೆ. ಇವುಗಳ ಆಶಯ ಈಡೇರಬೇಕಾದರೆ ಅರ್ಹರಿಗೆ ಸೌಲಭ್ಯ ತಲುಪಬೇಕು. ಈ ನಿಟ್ಟಿನಲ್ಲಿ ಪಟ್ಟಣ ವ್ಯಾಪ್ತಿಯ ಕಬ್ಬಿನಗದ್ದೆ, ಮಾವಿನಹಳ್ಳ ಗ್ರಾಮದ ೨೯ ಮಂದಿ ಗಿರಿಜನರಿಗೆ ಲ್ಯಾಂಪ್ ವಿತರಿಸಲಾಯಿತು. ಈ ಸಂದರ್ಭ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಕೆ. ಪ್ರೇಮ್‌ಕುಮಾರ್, ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಚಂದ್ರು ಸೇರಿದಂತೆ ಇತರರು ಉಪಸ್ಥಿತರಿದ್ದರು.