ಮಡಿಕೇರಿ, ಏ. ೯: ಕ್ರೀಡಾ ಕ್ಷೇತ್ರ, ನೃತ್ಯ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕರಕುಶಲ ಕ್ಷೇತ್ರ, ಚಿತ್ರಕಲೆ ಕ್ಷೇತ್ರ, ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರ ಹೀಗೆ ೮ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಮಾಡಿದ ೧೮ ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಗೆ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ವಿಶೇಷ ಸಾಧನೆಗೈದ ಪ್ರಶಸ್ತಿ ಪುರಸ್ಕೃತ ಮಗುವಾಗಿರಬೇಕು. ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗೆ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿ ಸಲ್ಲಿಸಲು ತಾ. ೧೮ ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆಹೆಚ್ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-೫೮೦೦೦೪ ಇಲ್ಲಿಗೆ ಕಳುಹಿಸುವುದು. ಅರ್ಜಿ ಸಲ್ಲಿಸುವಾಗ “ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ” ಎಂದು ಲಕೋಟೆ ಮೇಲೆ ನಮೂದಿಸಿರಬೇಕು.
ಹೆಚ್ಚಿನ ಮಾಹಿತಿಗೆ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-೫೮೦೦೦೪, ಕಚೇರಿ ದೂರವಾಣಿ: ೦೮೩೬-೨೪೬೧೬೬೬ ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.