ಕೂಡಿಗೆ, ಏ.೯: ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿ ವತಿಯಿಂದ ತಾ. ೧೦ರಂದು (ಇಂದು) ವಾರ್ಷಿಕ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ರಾಮ ನವಮಿ ಅಂಗವಾಗಿ ನಡೆಯಲಿದೆ.
ಮಧ್ಯಾಹ್ನ ೧ ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ವೇದ ಬ್ರಹ್ಮ ನರಹರಿಶರ್ಮಾ ಅವರ ನೇತೃತ್ವದಲ್ಲಿ ರಥೋತ್ಸವದ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಎನ್. ಸುರೇಶ್ ತಿಳಿಸಿದ್ದಾರೆ.