ಮಡಿಕೇರಿ, ಏ. ೯: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮಗಳನ್ನು ಪ್ರಸಕ್ತ ಸಾಲಿನಲ್ಲಿ ಶೇ. ೧೦೦ ರಷ್ಟು ಪ್ರಗತಿ ಸಾಧಿಸುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಸಮಿತಿ, ಎಸ್ಸಿ-ಎಸ್ಪಿ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಹಾಗೂ ಮ್ಯಾನ್ಯುವಲ್ ಸ್ಕಾವೆಂರ್ಸ್ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಉಪ ಯೋಜನೆಯಡಿ ದೊರೆಯುವ ಸೌಲಭ್ಯಗಳ ಕುರಿತು ಡಿಪಿಎಂಎಸ್ ತಂತ್ರಾAಶದಲ್ಲಿ ಸಂಬAಧಪಟ್ಟ ಇಲಾಖೆಗಳು ಕಡ್ಡಾಯವಾಗಿ ಮಾಹಿತಿ ಅಪ್ಡೇಟ್ ಮಾಡುವಂತೆ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆಯ ಕಾರ್ಯಕ್ರಮದಡಿ ಫಲಾನುಭವಿಗಳನ್ನು ಗುರುತಿಸಿ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯ ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ವೈಯಕ್ತಿಕ ಫಲಾನುಭವಿಗಳು ಯೋಜನೆಯ ಉಪಯೋಗ ಪಡೆಯದೇ ಹೋದಲ್ಲಿ ಯೋಜನೆ ಯನ್ನು ಸಮುದಾಯಗಳು ಪಡೆಯು ವಂತಾಗಲು ಅಗತ್ಯ ಮಾಹಿತಿ ನೀಡುವುದು ಮತ್ತು ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಎಸ್ಸಿಎಸ್ಪಿ ಕಾರ್ಯಕ್ರಮಗಳಿಗೆ ಸಂಬAಧಿಸಿ ದಂತೆ ಸಂಬAಧಪಟ್ಟ ಇಲಾಖೆಗಳು ಜಿ.ಪಂ. ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ಉಪ ಯೋಜನೆಗೆ ಸಂಬAಧಪಟ್ಟ ಮಾಹಿತಿ ನೀಡುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಉಪ ಯೋಜನಾ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ವಿವಿಧ ಇಲಾಖೆಗಳ ಭೌತಿಕ ಮತ್ತು ಆರ್ಥಿಕ ಗುರಿ ಸಾಧನೆ ಮತ್ತು ಮಾಸಿಕ ವರದಿಯ ಬಗ್ಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್ ಅವರು ಮಾಹಿತಿ ನೀಡಿದರು.
ಮಡಿಕೇರಿ ತಾಲೂಕಿನ ಹಾಕತ್ತೂರು ಗ್ರಾಮದಲ್ಲಿನ ಸರ್ವೆ ನಂಬರ್ ೯೬/೬ ರಲ್ಲಿ ೦.೩೦ ಸೆಂಟ್ ಜಾಗದ ಆರ್ಟಿಸಿಯಲ್ಲಿರುವ ಪೈಸಾರಿ ಜಾಗವನ್ನು ಸಾರ್ವಜನಿಕ ಸ್ಮಶಾನ ಎಂದು ದಾಖಲಿಸಿ ಆರ್ಟಿಸಿಯನ್ನು ಗ್ರಾ.ಪಂ.ಗೆ ಹಸ್ತಾಂತರಿಸಿ ಸ್ಮಶಾನ ಭೂಮಿಗೆ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಗ್ರಾ.ಪಂ.ನ ನರೇಗಾ ಕಾರ್ಯಕ್ರಮದಡಿ ಅಭಿವೃದ್ಧಿ ಪಡಿಸಲು ಜಿಲ್ಲಾಧಿಕಾರಿ ಸೂಚಿಸಿದರು.
ಸದಸ್ಯ ಪಳನಿ ಪ್ರಕಾಶ ಮಾತನಾಡಿ, ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೀನು ಪೇಟೆಯಲ್ಲಿರುವ ಸ್ಮಶಾನವನ್ನು ಸ್ಥಳಾಂತರಿಸುವAತೆ ಈ ಹಿಂದೆಯೇ ಮನವಿ ಮಾಡಲಾಗಿತ್ತು ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಅವರು ಆರ್ಜಿ ಗ್ರಾಮದಲ್ಲಿ ಸ್ಮಶಾನ ಭೂಮಿ ಉದ್ದೇಶಕ್ಕೆ ಒಂದು ಎಕರೆ ಜಾಗ ಗುರುತಿಸಲಾಗಿದೆ ಎಂದರು.
ಸದಸ್ಯ ಮುತ್ತಪ್ಪ ಮಾತನಾಡಿ, ಸೋಮವಾರಪೇಟೆ ತಾಲೂಕಿನ ಮಾದಾಪುರ ಪಂಚಾಯಿತಿಯ ಕುಂಬೂರು ವಾರ್ಡ್ ನಂಬರ್ ೧ ರ ಲಕ್ಕೇರಿ ಪೈಸಾರಿ ಜಾಗದಲ್ಲಿ ಸುಮಾರು ೨೧ ಪರಿಶಿಷ್ಟ ಜಾತಿಯ ಕುಟುಂಬಗಳು ವಾಸಿಸುತ್ತಿದ್ದು, ಸ್ಮಶಾನ ಭೂಮಿ ಇರುವುದಿಲ್ಲ. ಹಾಗೂ ಗೋಣಿ ಮರೂರು ಗ್ರಾ.ಪಂ.ನ ಗಣಗೂರು ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ೮೦ ಕುಟುಂಬಗಳು ವಾಸಿಸುತ್ತಿದ್ದು, ಇವರಿಗೆ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಈಗಾಗಲೇ ರುದ್ರಭೂಮಿಗಳಿಗೆ ಸಂಬAಧಿಸಿದAತೆ ಜಾಗ ಕಾಯ್ದಿರಿಸಲು ಕ್ರಮವಹಿಸಲಾಗಿದೆ. ಹಾಗೂ ಸಮುದಾಯ ಭವನಕ್ಕೆ ಸಂಬAಧಿಸಿದAತೆ ಸೂಕ್ತ ಜಾಗವನ್ನು ಗುರುತಿಸಿ ವರದಿ ಸಲ್ಲಿಸುವಂತೆ ಸೋಮವಾರಪೇಟೆ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಖ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲ ವಿಶಾಲ್ಕುಮಾರ್, ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಯೋಗಾನಂದ, ಪ್ರಕಾಶ್, ಪ್ರಶಾಂತ್, ಪೌರಾಯುಕ್ತ ಎಸ್.ವಿ. ರಾಮದಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಕೃಷ್ಣಪ್ರಸಾದ್ ಇತರರು ಇದ್ದರು.