ಕೂಡಿಗೆ, ಏ. ೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜಾ ಕಾರ್ಯಕ್ರಮವು ತಾ.೧೧ ರಂದು ದೇವಾಲಯದ ಆವರಣದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ಗಣಪತಿ ಹೋಮ, ಮೃತ್ಯುಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರ ಉಪದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ ಇತ್ಯಾದಿ ಪೂಜೆಗಳು, ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ ೭ ಗಂಟೆಗೆ ದೀಪಾಲಂಕಾರ ವಿಶೇಷ ಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಸೇರಿದಂತೆ ವಿಶೇಷ ಪೂಜೆ ನಡೆಯಲಿವೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.