ಸೋಮವಾರಪೇಟೆ, ಏ.೧೦: ಕಳೆದ ಅನೇಕ ಸಮಯಗಳಿಂದ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ‘ಮಿನಿಬಾರ್’ ಮಾಲೀಕರ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿದ್ದು, ಗ್ರಾಮಸ್ಥರಲ್ಲಿ ಒಂದಿಷ್ಟು ನೆಮ್ಮದಿ ಮೂಡಿಸಿದೆ.
ಬಜೆಗುಂಡಿ ಗ್ರಾಮದ ಗಣೇಶ್ ಹಾಗೂ ಸುಶೀಲ ಅವರುಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸಂದರ್ಭ ಪೊಲೀಸರು ಧಾಳಿ ನಡೆಸಿ, ೩ ಲೀಟರ್ ಮದ್ಯ ಸಹಿತ ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆದಿದ್ದು, ಈರ್ವರ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಕೂಲಿ ಕಾರ್ಮಿಕ ಕುಟುಂಬಗಳೇ ಶೇ.೯೮ರಷ್ಟಿರುವ ಪಟ್ಟಣ ಸಮೀಪದ ಬಜೆಗುಂಡಿ ಗ್ರಾಮದಲ್ಲಿ ಕಳೆದ ಅನೇಕ ಸಮಯಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ, ಅಬಕಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿರಲಿಲ್ಲ. ಆದರೆ ಮೊನ್ನೆ ದಿನ ಕಾರಿನಲ್ಲಿ ಮದ್ಯವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಸಂದರ್ಭ ಮಾಲು ಸಹಿತ ಸಿಕ್ಕಿಬಿದ್ದಿದ್ದು, ಗ್ರಾಮದ ಪ್ರಜ್ಞಾವಂತರಲ್ಲಿ ನೆಮ್ಮದಿ ಮೂಡಿಸಿದೆ.
ಅನೇಕ ಸಮಯದಿಂದ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಪಟ್ಟಣದಿಂದ ತರುವ ಅಗ್ಗದ ಮದ್ಯವನ್ನು ಹೆಚ್ಚಿನ ಬೆಲೆಗೆ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡಲಾಗುತ್ತಿತ್ತು. ಪೊಲೀಸ್ ಹಾಗೂ ಅಬಕಾರಿ ಇಲಾಖೆಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜವಾಗಿರಲಿಲ್ಲ. ಇದರಿಂದಾಗಿ ಇಲಾಖೆಗಳ ಮೇಲೂ ಸಂಶಯ ಮೂಡುವಂತಾಗಿತ್ತು. ಇದೀಗ ಪೊಲೀಸರು ಕಾನೂನು ಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದು ಗ್ರಾಮಸ್ಥರು ಅಭಿಪ್ರಾಯಿಸಿದ್ದಾರೆ.
ಸೋಮವಾರಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್, ಅಪರಾದ ಅಬಕಾರಿ ಇಲಾಖೆಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜವಾಗಿರಲಿಲ್ಲ. ಇದರಿಂದಾಗಿ ಇಲಾಖೆಗಳ ಮೇಲೂ ಸಂಶಯ ಮೂಡುವಂತಾಗಿತ್ತು. ಇದೀಗ ಪೊಲೀಸರು ಕಾನೂನು ಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದು ಗ್ರಾಮಸ್ಥರು ಅಭಿಪ್ರಾಯಿಸಿದ್ದಾರೆ.
ಸೋಮವಾರಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್, ಅಪರಾದ ವಿಭಾಗದ ಎಸ್.ಐ. ವಿರೂಪಾಕ್ಷ, ಸಿಬ್ಬಂದಿಗಳಾದ ಮಂಜುನಾಥ್, ಶಿವಕುಮಾರ್, ನವೀನ್, ಬಸಪ್ಪ ಅವರುಗಳು ಕಾರ್ಯಾಚರಣೆ ನಡೆಸಿದ್ದು, ಸುಶೀಲ ಮತ್ತು ಗಣೇಶ್ ಅವರುಗಳ ವಿರುದ್ದ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಅಕ್ರಮವಾಗಿ ಮಾರಾಟಕ್ಕೆ ಇಟ್ಟಿದ್ದ ೩ ಲೀಟರ್ ಮದ್ಯ ಸಹಿತ ಕಾರನ್ನು ವಶಕ್ಕೆ ಪಡೆದಿದ್ದಾರೆ.