ಮಡಿಕೇರಿ, ಏ. ೧೩: ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸಂಪುಟದಿAದ ವಜಾಗೊಳಿಸಿ ಬಂಧಿಸಬೇಕೆAದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ.
ಅಪರ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರು ಸಂತೋಷ್ ಸಾವಿನ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ಸಂತೋಷ್ ಮೃತಪಟ್ಟಿದ್ದು, ಸಾವಿನ ಹಿಂದೆ ಹಲವು ಸಂಶಯಗಳು ಮಡಿಕೇರಿ, ಏ. ೧೩: ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸಂಪುಟದಿAದ ವಜಾಗೊಳಿಸಿ ಬಂಧಿಸಬೇಕೆAದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ.
ಅಪರ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರು ಸಂತೋಷ್ ಸಾವಿನ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ಸಂತೋಷ್ ಮೃತಪಟ್ಟಿದ್ದು, ಸಾವಿನ ಹಿಂದೆ ಹಲವು ಸಂಶಯಗಳು ಮಟ್ಟದ ತನಿಖೆ ನಡೆಸಬೇಕು. ಗುತ್ತಿಗೆದಾರ ಸಂತೋಷ್ ಪಾಟೀಲ್ ಕೈಗೊಂಡಿರುವ ಎಲ್ಲಾ ಕಾಮಗಾರಿಗಳಿಗೆ ಬಿಲ್ ಪಾವತಿ ಮಾಡಬೇಕು ಮತ್ತು ಅವರ ಕುಟುಂಬಕ್ಕೆ ರೂ. ೧೦ ಲಕ್ಷ ಪರಿಹಾರವನ್ನು ಸರ್ಕಾರ ನೀಡಬೇಕೆಂದು ಒತ್ತಾಯಿಸಿದರು.
ಬ್ಲಾಕ್ ಅಧ್ಯಕ್ಷ ಕಲೀಲ್ ಬಾಷ, ಮಡಿಕೇರಿ ನಗರಾಧ್ಯಕ್ಷ ಕೆ.ಜಿ. ಪೀಟರ್, ಡಿಸಿಸಿ ಸದಸ್ಯ ಖಾಲಿದ್ ಹಾಜಿ, ಜಿಲ್ಲಾ ಉಪಾಧ್ಯಕ್ಷ ಟಿ.ಎ. ಮೊಹಮ್ಮದ್, ನಗರ ಉಪಾಧ್ಯಕ್ಷ ಬೌತೀಶ್ ಡಿಸೋಜಾ, ಎಂ.ಕೆ.ನೌಶದ್ ಹಾಗೂ ಕಾರ್ಯದರ್ಶಿ ಎಂ.ಇ. ನಿಯಾಜ್ ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.