ಮಡಿಕೇರಿ, ಏ. ೧೩: ತಾ. ೨೨ ರಿಂದ ಮೇ, ೧೮ ರವರೆಗೆ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಏಪ್ರಿಲ್, ೨೨ ರಿಂದ ಮೇ, ೧೮ ರವರೆಗೆ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು ೬,೦೫೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಕಲಾ ವಿಭಾಗದಲ್ಲಿ ೧,೫೭೦, ವಾಣಿಜ್ಯ ವಿಭಾಗದಲ್ಲಿ ೩,೧೯೨, ವಿಜ್ಞಾನ ವಿಭಾಗದಲ್ಲಿ ೧,೨೮೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ ೨,೯೧೯ ಬಾಲಕರು ಮತ್ತು ೩,೧೩೧ ಬಾಲಕಿಯರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ೬,೦೫೦ ವಿದ್ಯಾರ್ಥಿಗಳಲ್ಲಿ, ೫೪೨೩ ವಿದ್ಯಾರ್ಥಿಗಳು ಹೊಸದಾಗಿ (ಪ್ರೆರ‍್ಸ್), ೩೬೮ ಮಂದಿ ಪುನರಾವರ್ತಿತ (ರಿಪಿರ‍್ಸ್) ಹಾಗೂ ಖಾಸಗಿಯಾಗಿ ೨೫೯ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೧೭ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಡಿಕೇರಿ ತಾಲೂಕಿನ ೫, ಕುಶಾಲನಗರ ತಾಲೂಕಿನ ೪, ಸೋಮವಾರಪೇಟೆ ತಾಲೂಕಿನ ೩, ವೀರಾಜಪೇಟೆ ತಾಲೂಕು ೨, ಪೊನ್ನಂಪೇಟೆ ತಾಲೂಕಿನ ೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮ ಮತ್ತು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ೭ ಕಡೆಗಳಲ್ಲಿ ಮಾರ್ಗಾಧಿಕಾರಿಗಳ ತಂಡ ನಿಯೋಜಿಸಲಾಗಿದೆ. ಮಡಿಕೇರಿ ತಾಲೂಕಿನಲ್ಲಿ ೨ ಕಡೆ, ಸೋಮವಾರಪೇಟೆ ತಾಲೂಕಿನ ೧,ಕುಶಾಲನಗರ ತಾಲೂಕಿನ ೨, ವೀರಾಜಪೇಟೆ ತಾಲೂಕಿನ ೧ ಮತ್ತು ಪೊನ್ನಂಪೇಟೆ ತಾಲೂಕಿನಲ್ಲಿ ೧ ಮಾರ್ಗಾಧಿಕಾರಿಗಳ ತಂಡ ನಿಯೋಜಿಸಲಾಗಿದೆ. ಮಾರ್ಗಾಧಿಕಾರಿಗಳ ತಂಡದಲ್ಲಿ ಕಂದಾಯ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಒಳಗೊಂಡಿದೆ ಎಂದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

(ಮೊದಲ ಪುಟದಿಂದ)

ವ್ಯವಸ್ಥಿತವಾಗಿ ನಡೆಸಲು ಸೂಚನೆ

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ಸೂಚಿಸಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ಲೋಪ ಇಲ್ಲದೆ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಮಾರ್ಗಾಧಿಕಾರಿಗಳ ತಂಡ ನಿಯೋಜನೆ, ಭದ್ರತಾ ಕಾಯ್ದೆ ಜಾರಿ, ಹೀಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ಹಂತದ ಅಧಿಕಾರಿಗಳು ಮತ್ತು ಪ್ರಾಂಶುಪಾಲರು ಹೆಚ್ಚಿನ ಗಮನಹರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ಇನ್ಸ್ಪೆಕ್ಟರ್ ಮೇದಪ್ಪ, ಪ್ರಾಂಶುಪಾಲರಾದ ವಿಜಯ ಇತರರು ಹಲವು ಮಾಹಿತಿ ನೀಡಿದರು. ವಿವಿಧ ಕಾಲೇಜುಗಳ ಪ್ರಾಂಶುಪಾಲರು ಇದ್ದರು. ಭಾಗಮಂಡಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ ವಂದಿಸಿದರು.