ಮರಗೋಡು, ಏ. ೧೩: ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಮರಗೋಡು-ಕತ್ತಲೆಕಾಡು ರಸ್ತೆಯಲ್ಲಿ ಮರ ಉರುಳಿ ಬಿದ್ದಿದೆ. ಪರಿಣಾಮ ವಿದ್ಯುತ್ ಕಂಬ ಕೂಡ ರಸ್ತೆಗುರುಳಿ ಬಿದ್ದಿದ್ದು ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಈ ರಸ್ತೆ ಮೂಲಕ ಸಂಚರಿಸುವ ವಾಹನಗಳು ಪರದಾಡು ವಂತಾಗಿದೆ. ಗಾಳಿ ಮಳೆಯಿಂದಾಗಿ ಮರಗೋಡು ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯವಾಗಿದೆ.ಮರಗೋಡು, ಏ. ೧೩: ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಮರಗೋಡು-ಕತ್ತಲೆಕಾಡು ರಸ್ತೆಯಲ್ಲಿ ಮರ ಉರುಳಿ ಬಿದ್ದಿದೆ. ಪರಿಣಾಮ ವಿದ್ಯುತ್ ಕಂಬ ಕೂಡ ರಸ್ತೆಗುರುಳಿ ಬಿದ್ದಿದ್ದು ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಈ ರಸ್ತೆ ಮೂಲಕ ಸಂಚರಿಸುವ ವಾಹನಗಳು ಪರದಾಡು ವಂತಾಗಿದೆ. ಗಾಳಿ ಮಳೆಯಿಂದಾಗಿ ಮರಗೋಡು ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯವಾಗಿದೆ.
Àಂಚಾರ ಅಸ್ತವ್ಯಸ್ತ ಉಂಟಾಯಿತು. ಅಂಗಡಿ-ಮುAಗಟ್ಟುಗಳ ಫಲಕಗಳು ಗಾಳಿ ರಭಸಕ್ಕೆ ಧರೆಗೆ ಉರುಳಿದ ದೃಶ್ಯ ಕಂಡುಬAತು. ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಅಂಗಡಿ-ಮುAಗಟ್ಟುಗಳು ಕಚೇರಿಗಳ ಮುಂದೆ ನೀರು ತುಂಬಿ ಹರಿಯುತ್ತಿದ್ದು ಜನರ ಓಡಾಟಕ್ಕೆ ಅನಾನುಕೂಲ ಉಂಟಾಗಿರುವ ದೃಶ್ಯ ಗೋಚರಿಸಿತು. ಆನೆಕಾಡು ಬಳಿ ರಸ್ತೆಗೆ ಮರವೊಂದು ಬಿದ್ದ ಕಾರಣ ಸ್ವಲ್ಪ ಕಾಲ ಹೆದ್ದಾರಿ ಸಂಚಾರ ವ್ಯವಸ್ಥೆ ಸ್ಥಗಿತಗೊಂಡಿತ್ತು. ಮಾಹಿತಿ ಮೇರೆಗೆ ಕುಶಾಲನಗರ ವಲಯದ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಮರಗಳನ್ನು ತೆರವುಗೊಳಿಸುವ ಕಾರ್ಯ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕುಶಾಲನಗರ ಪಟ್ಟಣ ಸೇರಿದಂತೆ ಕೊಪ್ಪ ಸುತ್ತಮುತ್ತ ವ್ಯಾಪ್ತಿಯಲ್ಲಿ ಗಾಳಿ ಮಳೆ ಸಿಡಿಲು ಸಹಿತ ಸುಮಾರು ಒಂದು ಗಂಟೆಗಳ ಕಾಲ ನಿರಂತರವಾಗಿ ಸುರಿಯಿತು. ಯಾವುದೇ ರೀತಿಯ ಪ್ರಾಣಪಾಯ ಆಗಿರುವ ಬಗ್ಗೆ ವರದಿ ಆಗಿಲ್ಲ. ಗಾಳಿ ಮಳೆಯಿಂದ ವಿದ್ಯುತ್ ಸಂಪರ್ಕದಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಿದೆ.