ಕರಿಕೆ, ಏ. ೧೩: ರಾಜ್ಯದ ಗಡಿ ಜಿಲ್ಲೆ ಕೊಡಗು ಹಾಗೂ ಕೇರಳಕ್ಕೆ ನೇರವಾಗಿ ಸಂಪರ್ಕ ಕಲ್ಲಿಸುವ ಭಾಗಮಂಡಲ ಕರಿಕೆ ರಾಜ್ಯ ಹೆದ್ದಾರಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಹೊಸ ದುರ್ಗ-ಕಾಞಂಗಾಡ್-ಪಾಣತ್ತೂರು-ಕರಿಕೆ- ಭಾಗಮಂಡಲ-ಮಡಿಕೇರಿ ಮೂಲಕ ಅಂತರ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಕುರಿತು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯನವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಟ್ಕರಿಯವರಿಗೆ ಪತ್ರ ಬರೆದಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವದಾಗಿ ಕೇಂದ್ರ ಸಚಿವರು ಮರು ಉತ್ತರ ನೀಡಿದ್ದಾರೆ.
ಕಳೆದ ತಿಂಗಳು ಶಾಸಕರು ಕರಿಕೆಗೆ ಭೇಟಿ ನೀಡಿದಾಗ ಗ್ರಾಮಸ್ಥರು ಹಾಗೂ ಕೇರಳ ರಸ್ತೆ ವಿಕಸನ ಸಮಿತಿಯವರು ರಸ್ತೆ ಮೇಲ್ದರ್ಜೆಗೆ ಏರಿಸಲು ಶಾಸಕರಿಗೆ ಮನವಿ ಸಲ್ಲಿಸಿದಾಗ ಕೂಡಲೇ ಕೇಂದ್ರ ಸಚಿವರಿಗೆ ಈ ಕುರಿತು ಪತ್ರ ಬರೆಯಲಾಗುವುದು ಎಂದು ಭರವಸೆ ನೀಡಿದ್ದರು.
ಅಂತರ್ ರಾಜ್ಯ ಸಂಪರ್ಕ ರಸ್ತೆಯನ್ನು ರಾಷ್ಟಿçÃಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ. ಪತ್ರಕ್ಕೆ ಸಂಬAಧಿಸಿದ್ದAತೆ ಪ್ರತಿಕ್ರಿಯೆ ನೀಡಿದ್ದು, ಈ ಸಂಬAಧ ಪರಿಶೀಲಿಸ ಲಾಗುವುದು ಎಂದು ಉತ್ತರಿಸಿದ್ದಾರೆ. ಮುಂದಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರನ್ನು ಭೇಟಿ ಮಾಡಿ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ.