ಮಡಿಕೇರಿ, ಏ. ೧೩ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ ಜನ್ಮ ದಿನಾಚರಣೆಯು ತಾ. ೧೪ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಬೆಳಿಗ್ಗೆ ೯.೩೦ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಕಾವೇರಿ ಕಲಾಕ್ಷೇತ್ರದವರೆಗೆ ಮೆರವಣಿಗೆ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ಸಂಸದ ಪ್ರತಾಪ್‌ಸಿಂಹ, ಶಾಸಕರಾದ ವೀಣಾ ಅಚ್ಚಯ್ಯ, ಎಸ್.ಎಲ್.ಬೋಜೇಗೌಡ, ಸುಜಾ ಕುಶಾಲಪ್ಪ, ಆಯನೂರು ಮಂಜುನಾಥ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ವೀರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಚ್.ಆರ್.ಅರ್ಜುನ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ.