ಸುಂಟಿಕೊಪ್ಪ, ಏ. ೧೩ : ಸುಂಟಿಕೊಪ್ಪ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಸಂಯುಕ್ತ ಆಶ್ರಯದಲ್ಲಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದ್ದು, ಈ ಸಂಬAಧ ಸಂಗೀತ ಹಾಗೂ ಡ್ಯಾನ್ಸ್ ತರಬೇತಿಯನ್ನು ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ ೪ ರಿಂದ ೫ ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಯೋಜಕಿ ಪವಿತ್ರ ಶೆಟ್ಟಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೮೬೧೮೯೭೧೮೭೩ ಸಂಪರ್ಕಿಸುವAತೆ ಕೋರಿಕೊಂಡಿದ್ದಾರೆ.