ಮಡಿಕೇರಿ, ಏ.೧೩: ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ವಾಜಪೇಯಿ ನಗರ ವಸತಿ ಯೋಜನೆಯಡಿ ೩೮ ಮನೆಗಳು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ(ನಗರ) ಯಡಿ ೧೨ ಮನೆಗಳ ಗುರಿ ಹೊಂದಲಾಗಿದೆ. ಅದರಂತೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವ ವಸತಿ ರಹಿತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಆಸಕ್ತರು ಅರ್ಜಿಯನ್ನು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಚೇರಿಗೆ ಏಪ್ರಿಲ್, ೨೫ ರ ಸಂಜೆ ೫.೩೦ ರೊಳಗೆ ಸಲ್ಲಿಸುವಂತೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಅವರು ತಿಳಿಸಿದ್ದಾರೆ.