ಮಡಿಕೇರಿ ಏ.೧೩ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದÀ ಕೈಬಿಟ್ಟು ಬಂಧಿಸಬೇಕೆAದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಪ್ರತಿಭಟನೆ ನಡೆಸಿತು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಈಶ್ವರಪ್ಪ ಅವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದರು. ಮೃತ ಗುತ್ತಿಗೆದಾರ ಸಚಿವ ಈಶ್ವರಪ್ಪ ಅವರಿಗೆ ಆತ್ಮೀಯರಾಗಿದ್ದರು, ಮಾತ್ರವಲ್ಲ ಬಿಜೆಪಿ ಕಾರ್ಯಕರ್ತರಾಗಿದ್ದರು. ಇವರÀ ಸ್ಥಿತಿಯೇ ಹೀಗಾದರೆ ಬೇರೆಯವರ ಗತಿ ಏನು, ಬಿಜೆಪಿ ಸರ್ಕಾರದ ಕರ್ಮಕಾಂಡಕ್ಕೆ ಇನ್ನೆಷ್ಟು ಜೀವ ಬಲಿಯಾಗಬೇಕು ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಖಲೀಲ್ ಪ್ರಶ್ನಿಸಿದರು.

ಹಿಂದೂ ಕಾರ್ಯಕರ್ತನ ಆತ್ಮಹತ್ಯೆಗೆ ತಮ್ಮದೇ ಪಕ್ಷದ ಸಚಿವರು ಕಾರಣಕರ್ತರು ಎನ್ನುವ ಆರೋಪವಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಮುಖರಾದ ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮೌನಕ್ಕೆ ಶರಣಾಗಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರವು ಇಲ್ಲ, ಸಾಂತ್ವನವು ಇಲ್ಲದಂತಾಗಿದೆ. ಬಿಜೆಪಿ ಆಡಳಿತದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಕಮಿಷನ್ ಕಿರುಕುಳದ ಬಗ್ಗೆ ಮೃತ ಸಂತೋಷ್ ಪಾಟೀಲ್ ಬಿಜೆಪಿ ವರಿಷ್ಠರು, ಪ್ರಧಾನಿ ನರೇಂದ್ರಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ದೂರಿಕೊಂಡಿದ್ದಾರೆ. ಆದರೆ ಯಾರಿಂದಲೂ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕಲೀಲ್ ಆರೋಪಿಸಿದರು. ನಗರಸಭಾ ಸದಸ್ಯರಾದ ಮನ್ಸೂರ್, ಬಶೀರ್ ಅಹಮ್ಮದ್, ಎಸ್‌ಡಿಪಿಐ ಪ್ರಮುಖರಾದ ಮುಸ್ತಫ, ಜಲೀಲ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.