ಮಡಿಕೇರಿ, ಏ.೧೩ : ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಮಂಡಳಿ ಸಭೆ ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ಕ್ರೋಢೀಕರಣದ ಬಗ್ಗೆ ನಿರ್ದೇಶಕರು ಹಲವು ಸಲಹೆಗಳನ್ನು ನೀಡಿದರು. ಅಲ್ಲದೆ ಕೆಲವರಿಗೆ ತಾಲೂಕು ಹಾಗೂ ಹೋಬಳಿವಾರು ಜವಾಬ್ದಾರಿಯನ್ನು ನೀಡಲಾಯಿತು.

ಜಿಲ್ಲೆಯಿಂದ ರಾಜ್ಯ ಒಕ್ಕಲಿಗರ ಸಂಘವನ್ನು ಪ್ರತಿನಿಧಿಸುತ್ತಿರುವ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಅವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಂದ್ರ ರಾಜ್ಯ ಒಕ್ಕಲಿಗರ ಸಂಘದಿAದ ಲಭ್ಯವಾಗುವ ಸೌಲಭ್ಯಗಳನ್ನು ಹಾಗೂ ವಿವಿಧ ಕಾರ್ಯಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಒಕ್ಕಲಿಗರ ಜನಾಂಗದ ಮಕ್ಕಳಿಗೆ ಉಪಯೋಗವಾಗುವ ರೀತಿಯಲ್ಲಿ ವಸತಿ ನಿಲಯ ನಿರ್ಮಾಣ, ಚಿಕಿತ್ಸಾ ಘಟಕ ಮತ್ತು ಡಯಾಲಿಸಿಸ್ ಕೇಂದ್ರ ಸ್ಥಾಪನೆಗೆ ಪ್ರಯತ್ನ ಮಾಡುವುದಾಗಿ ತಿಳಿಸಿದರು.ಮಡಿಕೇರಿ, ಏ.೧೩ : ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಮಂಡಳಿ ಸಭೆ ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ಕ್ರೋಢೀಕರಣದ ಬಗ್ಗೆ ನಿರ್ದೇಶಕರು ಹಲವು ಸಲಹೆಗಳನ್ನು ನೀಡಿದರು. ಅಲ್ಲದೆ ಕೆಲವರಿಗೆ ತಾಲೂಕು ಹಾಗೂ ಹೋಬಳಿವಾರು ಜವಾಬ್ದಾರಿಯನ್ನು ನೀಡಲಾಯಿತು.

ಜಿಲ್ಲೆಯಿಂದ ರಾಜ್ಯ ಒಕ್ಕಲಿಗರ ಸಂಘವನ್ನು ಪ್ರತಿನಿಧಿಸುತ್ತಿರುವ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಅವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಂದ್ರ ರಾಜ್ಯ ಒಕ್ಕಲಿಗರ ಸಂಘದಿAದ ಲಭ್ಯವಾಗುವ ಸೌಲಭ್ಯಗಳನ್ನು ಹಾಗೂ ವಿವಿಧ ಕಾರ್ಯಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಒಕ್ಕಲಿಗರ ಜನಾಂಗದ ಮಕ್ಕಳಿಗೆ ಉಪಯೋಗವಾಗುವ ರೀತಿಯಲ್ಲಿ ವಸತಿ ನಿಲಯ ನಿರ್ಮಾಣ, ಚಿಕಿತ್ಸಾ ಘಟಕ ಮತ್ತು ಡಯಾಲಿಸಿಸ್ ಕೇಂದ್ರ ಸ್ಥಾಪನೆಗೆ ಪ್ರಯತ್ನ ಮಾಡುವುದಾಗಿ ತಿಳಿಸಿದರು.