ಮಡಿಕೇರಿ, ಏ. ೧೫: ಕುಶಾಲನಗರದ ಯೂತ್ ಫ್ರೆಂಡ್ಸ್ ಮತ್ತು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಆಡಳಿತಾಧಿಕಾರಿಗಳ ಅನುಮತಿಯೊಂದಿಗೆ ೪ನೇ ವರ್ಷದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ತಾ.೧೬ ಮತ್ತು ೧೭ ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕುಶಾಲನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಯೂತ್ ಫ್ರೆಂಡ್ಸ್ ಅಧ್ಯಕ್ಷ ಜಿ.ಆರ್.ಅಜಿತ್ ಕುಮಾರ್ ಅಧ್ಯಕ್ಷತೆಯಲ್ಲಿ ಪಂದ್ಯಾಟ ನಡೆಯಲಿದ್ದು ಮಧ್ಯಾಹ್ನ ೩ ಗಂಟೆಗೆ ಕಾಂಗ್ರೆಸ್ ಮುಖಂಡ ಡಾ.ಮಂಥರ್ ಗೌಡ ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ.

ಎಂಎಲ್‌ಸಿ ವೀಣಾ ಅಚ್ಚಯ್ಯ ಮಾಜಿ ಸಚಿವ ಬಿ.ಎ.ಜೀವಿಜಯ, ಕೆಪಿಸಿಸಿ ವಕ್ತಾರ ಎಚ್.ಎಸ್.ಚಂದ್ರಮೌಳಿ, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಕೊಡಗು ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಜಿ.ಪಂ. ಮಾಜಿ ಸದಸ್ಯ ವಿ.ಪಿ.ಶಶಿಧರ್, ಸೇರಿದಂತೆ ಕುಶಾಲನಗರ ಪ.ಪಂ. ಸದಸ್ಯರು, ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ. ಭಾನುವಾರ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಎಸ್.ಪೊನ್ನಣ್ಣ, ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್, ಅಂರ‍್ರಾಷ್ಟಿçÃಯ ಮಾಜಿ ಕಬಡ್ಡಿ ಕ್ರೀಡಾಪಟು ಎಂ.ವಿ.ಪ್ರಸಾದ್‌ಬಾಬು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.