ಕುಶಾಲನಗರ, ಏ. ೧೫: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸಚಿವ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸುವAತೆ ಆಗ್ರಹಿಸಿ ಕುಶಾಲನಗರ ಎಸ್.ಡಿ.ಪಿ.ಐ. ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಈಶ್ವರಪ್ಪರವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಪಟ್ಟAತೆ ಆತ್ಮಹತ್ಯೆಗೆ ಈಶ್ವರಪ್ಪನವರೇ ನೇರವಾಗಿ ಕಾರಣವಾಗಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ, ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಉಸ್ಮಾನ್ ಸುಂಟಿಕೊಪ್ಪ, ಘಟಕ ಅಧ್ಯಕ್ಷ ಭಾಷಾ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.