ಮಡಿಕೇರಿ, ಏ. ೧೫: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ಕಲಾವಿದರ ದತ್ತಾಂಶ ಸಂಗ್ರಹಕ್ಕೆ ಆನ್‌ಲೈನ್ ಮೂಲಕ ನೋಂದಾಯಿಸುವ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯಡಿ ಕೊಡವ ಸಾಹಿತಿ, ಕಲಾವಿದರು ಸೇವಾಸಿಂಧು ಪೋರ್ಟಲ್ sevಚಿsiಟಿಜhu. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ತಮ್ಮ ಮಾಹಿತಿ ದಾಖಲಿಸಬಹುದು.

ನಿಗದಿತ ಅರ್ಜಿಯನ್ನು ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸುವ ಸಾಹಿತಿಗಳು ಸಾಹಿತ್ಯ ಕ್ಷೇತ್ರದಲ್ಲಿ ೮ ವರ್ಷದಿಂದ ಮತ್ತು ಕಲಾವಿದರು ಕನಿಷ್ಟ ೫ ವರ್ಷಗಳಿಂದ ತೊಡಗಿಸಿಕೊಂಡಿರಬೇಕು. ಸಾಹಿತಿಗಳು ಕನಿಷ್ಟ ಒಂದು ಪುಸ್ತಕ ಪ್ರಕಟಿಸಿರಬೇಕು. ಚಿತ್ರ, ಶಿಲ್ಪ ಕಲಾವಿದರು ಕನಿಷ್ಟ ೫ ಕಲಾಕೃತಿಗಳನ್ನು ರಚಿಸಿರಬೇಕು. ಅರ್ಜಿಯಲ್ಲಿ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಬ್ಯಾಂಕ್ ವಿವರ ಸ್ಪಷ್ಟವಾಗಿ ನಮೂದಿಸಬೇಕು ಎಂದು ಅಕಾಡೆಮಿಯ ರಿಜಿಸ್ಟಾçರ್ ಅಜ್ಜಿಕುಟ್ಟಿರ ಸಿ. ಗಿರೀಶ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ದೂ.ಸಂ.೦೮೨೭೨-೨೨೯೦೭೪ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ತಿಳಿಸಿದ್ದಾರೆ.