ಶನಿವಾರಸಂತೆ, ಏ. ೧೫: ಕ್ಷÄಲ್ಲಕ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಮೂಲತಃ ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಂಬಿ ಗ್ರಾಮದ ಮನು ಎಂಬವರ ಪುತ್ರಿ ಸೌಮ್ಯ (೧೯) ಮೃತೆ ಯುವತಿ. ಶನಿವಾರಸಂತೆ ಸಮೀಪದ ಮೆಣಸ ಗ್ರಾಮದ ತ್ಯಾಗರಾಜ ಅವರ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಲೈನ್ ಮನೆಯಲ್ಲಿ ವಾಸ ಮಾಡಿಕೊಂಡಿದ್ದ ಸೌಮ್ಯ ಅದೇ ಲೈನ್ ಮನೆಯಲ್ಲಿ ವಾಸಿಸುತ್ತಿದ್ದ ಪ್ರಕಾಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ ಪ್ರಕಾಶ್ ಬೇರೆ ಮಹಿಳೆಯೊಂದಿಗೆ ಮಾತನಾಡುತ್ತಿದ್ದುದನ್ನು ನೋಡಿದ ಸೌಮ್ಯ ಸಿಟ್ಟು ಮಾಡಿಕೊಂಡು ಇದೇ ವಿಷಯದಲ್ಲಿ ತಾ. ೮ರಂದು ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೆ ತಾ. ೧೪ರಂದು ಮೃತಪಟ್ಟಿದ್ದಾಳೆ.
ಯುವತಿಯ ತಂದೆ ಮನು ಶನಿವಾರಸಂತೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆ ಶನಿವಾರಸಂತೆ ಯಲ್ಲಿ ಪ್ರಕರಣ ದಾಖಲಾಗಿದೆ.