ಮಡಿಕೇರಿ, ಏ. ೧೬: ಕೊಡಗು ಜಿಲ್ಲಾ ಕನ್ನಡ ಸಿರಿ ಸ್ನೇಹ ಬಳಗ, ಕರ್ನಾಟಕ ಲೇಖಕಿಯರ ಸಂಘ ಕೊಡಗು ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ತಾ. ೧೭ರಂದು (ಇಂದು) ಯುಗಾದಿ ಕವಿಗೋಷ್ಠಿ ನಡೆಯಲಿದೆ.
ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ಬುಡಕಟ್ಟು ಸಂಶೋಧನ ಸಂಸ್ಥೆಯ ಸಂಶೋಧನ ಅಧಿಕಾರಿ ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಕವಿ ಜಯಪ್ಪ ಹೊನ್ನಾಳಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ ಕ.ಸಾ.ಪ. ಮಾಜಿ ಅಧ್ಯಕ್ಷ ವೈ.ಡಿ. ರಾಜಣ್ಣ, ಕುಶಾಲನಗರ ರೋಟರಿ ಅಧ್ಯಕ್ಷ ರಂಗಸ್ವಾಮಿ, ಪ.ಪಂ. ಸದಸ್ಯ, ಆನಂದ್ ಕುಮಾರ್, ಕನ್ನಡ ಸಿರಿ ಸ್ನೇಹ ಬಳಗದ ಸಂಚಾಲಕ ಲೋಕೇಶ್ ಸಾಗರ್, ಲೇಖಕಿಯರ ಸಂಘದ ಕಾರ್ಯದರ್ಶಿ ಶರ್ಮಿಳ ರಮೇಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.