ಸುAಟಿಕೊಪ್ಪ, ಏ. ೧೭: ನಾರ್ಗಾಣೆ ಗ್ರಾಮದ ಶ್ರೀದೇವಿಯ ಅಣ್ಣಪ್ಪ ಸ್ವಾಮಿ ದೇವಾಲಯದಲ್ಲಿ ಹಲವು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿರುವ ಧರ್ಮ ದೈವದ ನೇಮೋತ್ಸವವು ೨ ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯ ಹಾಗೂ ಧರ್ಮ ದೈವಗಳ ನೇಮೋತ್ಸವದೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಅಣ್ಣಪ್ಪಸ್ವಾಮಿ ದೇವಾಲಯದಲ್ಲಿ ಧರ್ಮ ದೈವದ ನೇಮೋತ್ಸವದ ಅಂಗವಾಗಿ ದೇವಾಲಯದ ಆವರಣದ ವ್ಯಾಪ್ತಿಯಲ್ಲಿ ತಳಿರು ತೋರಣ, ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ಸುತ್ತಮುತ್ತಲ ಗ್ರಾಮಗಳಾದ ವೀರಾಜಪೇಟೆ, ಸಿದ್ದಾಪುರ, ಕುಶಾಲನಗರ ಹಾಗೂ ನೆರೆಯ ಜಿಲ್ಲೆಯ ಸುಳ್ಯ, ಪುತ್ತೂರು ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದಿದ್ದರು.