ಮಡಿಕೇರಿ, ಏ. ೧೭: ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಮಿತಿ ಮೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೊಡಗು ರಕ್ಷಣಾ ವೇದಿಕೆಯ ನಾಪೋಕ್ಲು ಘಟಕದ ಅಧ್ಯಕ್ಷ ಕೇಲೇಟಿರ ದೀಪು ದೇವಯ್ಯ, ಮುಂದಿನ ೧೫ ದಿನಗಳೊಳಗೆ ಪರಿಸ್ಥಿತಿ ಸುಧಾರಣೆಯಾಗದಿದ್ದಲ್ಲಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಎರಡು ವಾರಗಳಿಂದ ನಾಪೋಕ್ಲು ವ್ಯಾಪ್ತಿಯಲ್ಲಿ ರಾತ್ರಿ ವೇಳೆ ವಿದ್ಯುತ್ ಕಡಿತಗೊಂಡು ಕಾರ್ಗತ್ತಲು ಆವರಿಸುತ್ತಿದೆ. ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿAದ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಯುವ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಕಾರ್ಯಕ್ಕೆ ಅಡಚಣೆ ಎದುರಾಗಿದೆೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.