ಮಡಿಕೇರಿ, ಏ. ೧೭: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದ ಹಾಗೂ ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೬ ನೇ ತರಗತಿ ದಾಖಲಾತಿಗೆ ಸೇವಾಸಿಂಧು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ತಾ. ೨೨ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/ ೨೨೦೨೧೪, ಪ್ರಾಂಶುಪಾಲರು, ಕೊಡ್ಲಿಪೇಟೆ ೯೬೩೨೭೪೬೪೧೧, ೮೩೧೦೯೪೯೬೯೩, ಪ್ರಾಂಶುಪಾಲರು, ವೀರಾಜಪೇಟೆ: ೯೬೮೬೧೩೮೬೮೮, ೯೭೪೧೨೦೯೮೨೬, ಮಾಹಿತಿ ಕೇಂದ್ರ ಮಡಿಕೇರಿ ೯೯೭೨೭೯೯೦೯೧, ಮಾಹಿತಿ ಕೇಂದ್ರ, ಸೋಮವಾರಪೇಟೆ ೮೫೪೮೦೬೮೫೧೯, ಮಾಹಿತಿ ಕೇಂದ್ರ, ಪೊನ್ನಂಪೇಟೆ ೯೯೦೦೭೩೧೦೩೭ ನ್ನು ಸಂಪರ್ಕಿಸಬಹುದು.
ಇಲಾಖಾ ವೆಬ್ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಮತ ತಿಳಿಸಿದ್ದಾರೆ.