ಸಿದ್ದಾಪುರ, ಏ. ೧೭: ಕರಡಿಗೋಡು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಿಳಿಗೇರಿಯ ಉದಯಕುಮಾರ್ ತಂತ್ರಿ ನೇತೃತ್ವದಲ್ಲಿ ನಾಲ್ಕು ದಿನಗಳ ಕಾಲ ನಡೆದ ವಾರ್ಷಿಕ ಉತ್ಸವ ಇಂದು ಸಂಪನ್ನಗೊAಡಿದೆ.
ತಾ. ೧೦ ರಂದು ಪ್ರಾರಂಭವಾದ ಉತ್ಸವವು ಕುಕ್ಕುನೂರು ಕುಟುಂಬಸ್ಥರ ನೇತೃತ್ವದಲ್ಲಿ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು.
ದೇವರಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ಉತ್ಸವದ ಅಂಗವಾಗಿ ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ, ಕೊಂಡ ಸೇವೆ, ಮಹಾಪೂಜೆ, ಹರಕೆ ಒಪ್ಪಿಸುವುದು, ಅನ್ನಸಂತರ್ಪಣೆ, ದೇವರ ಮನೆ ಮೆರವಣಿಗೆ ಎಂಬಿತ್ಯಾದಿ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿತು.
ಸಿದ್ದಾಪುರ, ನೆಲ್ಲಿಹುದಿಕೇರಿ, ಸೇರಿದಂತೆ ಎಲ್ಲಾ ಗ್ರಾಮಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.