ಸೋಮವಾರಪೇಟೆ, ಏ. ೧೭: ತಾಲೂಕು ಒಕ್ಕಲಿಗರ ಸಂಘಕ್ಕೆ ೫೩ ವರ್ಷಗಳು ತುಂಬಿದ್ದು, ಜೂನ್ ೧೪ರಂದು ಅದ್ಧೂರಿಯಾಗಿ ಸುವರ್ಣ ಮಹೋತ್ಸವ ಸಂಭ್ರಮವನ್ನು ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದೆ. ಸುವರ್ಣ ಮಹೋತ್ಸವ ಅಂಗವಾಗಿ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮದ ಅಂಗವಾಗಿ ಸೋಮವಾರಪೇಟೆ, ಏ. ೧೭: ತಾಲೂಕು ಒಕ್ಕಲಿಗರ ಸಂಘಕ್ಕೆ ೫೩ ವರ್ಷಗಳು ತುಂಬಿದ್ದು, ಜೂನ್ ೧೪ರಂದು ಅದ್ಧೂರಿಯಾಗಿ ಸುವರ್ಣ ಮಹೋತ್ಸವ ಸಂಭ್ರಮವನ್ನು ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದೆ. ಸುವರ್ಣ ಮಹೋತ್ಸವ ಅಂಗವಾಗಿ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮದ ಅಂಗವಾಗಿ ರೂ.ಗಳ ವೆಚ್ಚದಲ್ಲಿ ಸುವರ್ಣ ದ್ವಾರ ನಿರ್ಮಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಲಿದ್ದಾರೆ ಎಂದರು. ೧೯೬೮ರಲ್ಲಿ ಕೊಡಗಿನ ಜಿಲ್ಲಾಧಿಕಾರಿಯಾಗಿದ್ದ ಕೆ.ಎಸ್. ಮಲ್ಲೇಗೌಡ್ರು, ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ಸ್ಥಾಪನೆಗೆ ೨೫೦ ರೂ.ಗಳನ್ನು ಧನ ಸಹಾಯ ಮಾಡಿದ್ದರು. ಸೋಮವಾರಪೇಟೆ ಚೌಡ್ಲು ಗ್ರಾಮ ನಿವಾಸಿ ದಾನಿಗಳಾದ ಸಿ.ಕೆ. ಕಾಳಪ್ಪ ಅವರು ಸ್ಥಾಪಕ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕಾಳಪ್ಪನವರು ಸಮುದಾಯ ಭವನ ಕಟ್ಟಲು ೧.೮೦ ಎಕರೆ ಜಾಗವನ್ನು ಒಕ್ಕಲಿಗರ ಸಂಘಕ್ಕೆ ದಾನ ನೀಡಿದ್ದು, ಇದೀಗ ನಾಲ್ಕು ಕೋಟಿ ವೆಚ್ಚದ ಸುಸಜ್ಜಿತ ಸಮುದಾಯ ಭವನ ನಿರ್ಮಿಸಲಾಗಿದೆ ಎಂದು ವಿವರಣೆ ಒದಗಿಸಿದರು. ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ನಡೆಸಲಾಗುತ್ತಿದೆ. ಆಂಗ್ಲ ಮಾಧ್ಯಮದಲ್ಲಿ ೯೦೦ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಳೆದ ೫೦ ವರ್ಷಗಳಲ್ಲಿ ಸುಮಾರು ೧೫ ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿಯನ್ನು ಸಂಘ ಸಂಪಾದನೆ ಮಾಡಿ ಅಭಿವೃದ್ಧಿ ಪಥದಲ್ಲಿದೆ ಎಂದು ಮುತ್ತಣ್ಣ ತಿಳಿಸಿದರು.
ಗೋಷ್ಠಿಯಲ್ಲಿ ಸ್ಮರಣ ಸಂಚಿಕೆ ಸಂಪಾದಕ ಕೆ.ಟಿ. ಪರಮೇಶ್, ಕುವೆಂಪು ಶಾಲೆಯ ಭಾತ್ಮೀದಾರ ಕೆ.ಎಂ. ಜಗದೀಶ್, ಮೆರವಣಿಗೆ ಸಮಿತಿ ಕಾರ್ಯದರ್ಶಿ ನಂದಕುಮಾರ್ ಉಪಸ್ಥಿತರಿದ್ದರು.