ಮಡಿಕೇರಿ, ಏ. ೧೭: ಕೇಂದ್ರ ಸರ್ಕಾರದಿಂದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ ಅನುಷ್ಠಾನ ಗೊಳಿಸಲಾಗುತ್ತಿರುವ ‘ಸಖಿ’ ಒನ್ ಸ್ಟಾಪ್ ಕೇಂದ್ರಕ್ಕೆ ಸರ್ಕಾರದ ಮಾರ್ಗಸೂಚಿಯಂತೆ ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರು/ ಪ್ಯಾರಾಲೀಗಲ್ ಪರ್ಸನಲ್ ೨ ಹುದ್ದೆ(ಮಹಿಳಾ ಅಭ್ಯರ್ಥಿಗಳಿಗೆ ಮೀಸಲು) ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾನೂನು ಪದವೀಧರರಾಗಿರಬೇಕು. ಸರ್ಕಾರಿ, ಸರ್ಕಾರೇತರ ಯೋಜನೆ, ಕಾರ್ಯಕ್ರಮಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂಬAಧಿಸಿದAತೆ ಕನಿಷ್ಟ ೩ ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು ಮತ್ತು ಕಂಪ್ಯೂಟರ್ ತರಬೇತಿ ಕಡ್ಡಾಯವಾಗಿದೆ. ಮಾಸಿಕ ರೂ. ೨೫೦೦೦ ಗೌರವಧನ ನೀಡಲಾಗುತ್ತದೆ.

‘ಸಖಿ’ ಒನ್ ಸ್ಟಾಪ್ ಸೆಂಟರ್‌ಗೆ ಆಯ್ಕೆಯಾಗುವ ಕಾನೂನು ಸಲಹೆಗಾರರು ೨೪x೭ ಕಾರ್ಯನಿರ್ವಹಿಸಲು ಅನುವಾಗುವಂತೆ ಹಗಲು ಮತ್ತು ರಾತ್ರಿ ಪಾಳಿಯದಲ್ಲಿ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು. ಈ ನೇಮಕಾತಿಯು ೧೧ ತಿಂಗಳ ಅವಧಿಯದಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇರೆಗೆ ನವೀಕರಿಸಲಾಗುವುದು. ಅರ್ಹ ಅಭ್ಯರ್ಥಿಗಳು ಸ್ವಯಂ ದೃಢೀಕರಿಸಿದ ಸ್ವ ವಿವರಗಳುಳ್ಳ ಅರ್ಜಿಯೊಂದಿಗೆ ಅಂಕಪಟ್ಟಿಗಳು ಮತ್ತು ಅನುಭವ ಪ್ರಮಾಣ ಪತ್ರಗಳನ್ನು ತಾ. ೨೬ ರೊಳಗೆ ಸಂಜೆ ೫ ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‌ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿಗೆ ಖುದ್ದಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೯೮೩೭೯ ನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದ್ದಾರೆ.