ಮಡಿಕೇರಿ, ಏ.೧೮: ವೀರಾಜಪೇಟೆ ತಾಲೂಕಿನ ಕೂಟಿಯಾಲ ಸೇತುವೆ/ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ರೂ. ೨.೬೦ ಕೋಟಿ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ.
ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದಿಂದ ಕೂಟಿಯಾಲ ಸೇತುವೆ/ ಕೂಡುರಸ್ತೆ ಕಾಮಗಾರಿ ಅಭಿವೃದ್ಧಿ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು, ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಕೂಟಿಯಾಲ ಸೇತುವೆ ಕೂಡುರಸ್ತೆ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ:ಗ್ರಾ.ಅ.ಪA:೩೧:ಎಸ್ಜಿವೈ.೨೦೨೨(ಇ-೭೩೬೬೬೯), ಬೆಂಗಳೂರು ದಿನಾಂಕ:-೦೬-೦೪-೨೦೨೨ ರಂದು ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಸಕರು ತಿಳಿಸಿದ್ದಾರೆ.