ಹುಬ್ಬಳ್ಳಿ ಗಲಭೆ ಪ್ರಕರಣ: ೪೦ ಮಂದಿ ಪೊಲೀಸರ ವಶಕ್ಕೆ
ಹುಬ್ಬಳ್ಳಿ, ಏ. ೧೭: ಪ್ರಚೋದನಕಾರಿ ವಾಟ್ಸಾö್ಯಪ್ ಸ್ಟೇಟಸ್ ವಿರೋಧಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಒಟ್ಟು ೧೨ ಮಂದಿ ಪೊಲೀಸರು ಗಾಯಗೊಂಡಿದ್ದು, ಪ್ರಕರಣ ಸಂಬAಧ ೪೦ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಆನಂದನಗರದ ನಿವಾಸಿ ಅಭಿಷೇಕ್ ಹಿರೇಮಠ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ವೊಂದು ವೈರಲ್ ಆಗಿದ್ದು, ಈ ಪೋಸ್ಟ್ಗೆ ಸಂಬAಧಿಸಿದAತೆ ಕಳೆದ ರಾತ್ರಿ ಪ್ರತಿಭಟನೆ ನಡೆದಿತ್ತು. ಪೋಸ್ಟ್ ಸಂಬAಧ ಪೊಲೀಸ್ ಠಾಣೆಗೆ ಆಗಮಿಸಿದ ಮುಸ್ಲಿಂ ಸಂಘಟನೆಯ ಸದಸ್ಯರು, ಆರೋಪಿಯನ್ನು ಕೂಡಲೇ ಬಂಧನಕ್ಕೊಳಪಡಿಸುವAತೆ ಆಗ್ರಹಿಸಿದ್ದರು. ಬಳಿಕ ಪೊಲೀಸರು ಅಭಿಷೇಕ್‌ನನ್ನು ಬಂಧನಕ್ಕೊಳಪಡಿಸಿದ್ದರು. ವ್ಯಕ್ತಿಯ ಬಂಧನದ ಬಳಿಕವೂ ಪ್ರತಿಭಟನೆ ನಿಲ್ಲಿಸದ ಜನರು ನಂತರ ವ್ಯಕ್ತಿಯನ್ನು ತಮ್ಮ ವಶಕ್ಕೆ ನೀಡುವಂತೆ ಆಗ್ರಹಿಸಿದರು. ಈ ವೇಳೆ ಠಾಣೆ ಮುಂದೆ ನೂರಾರು ಜನರು ಜಮಾಯಿಸಿದ್ದರು. ಕೆಲವರು ಪ್ರತಿಭಟನೆಯನ್ನು ತೀವ್ರಗೊಳಿಸಿ, ಸ್ಥಳದಲ್ಲಿದ್ದ ವಾಹನಗಳ ಮೇಲೆ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ಆರಂಭಿಸಿದ್ದರು. ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣ ಸಂಬAಧ ಇದೀಗ ೪೦ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಾಭು ರಾಮ್ ತಿಳಿಸಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆ ಆದೇಶವನ್ನು ತಾ. ೨೦ ರವರೆಗೆ ವಿಸ್ತರಿಸಲಾಗಿದೆ.
ಜೆ.ಡಿ.ಎಸ್. ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ
ಬೆAಗಳೂರು, ಏ. ೧೭: ಜೆ.ಡಿ.ಎಸ್. ರಾಜ್ಯ ಘಟಕದ ಅಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಂಡಿದ್ದಾರೆ. ಹಾಲಿ ಅಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈವರೆಗೆ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಹೆಚ್.ಕೆ. ಕುಮಾರಸ್ವಾಮಿ ಅವರು ಇಬ್ರಾಹಿಂಗೆ ಅಧಿಕಾರ ವಹಿಸಿಕೊಟ್ಟರು. ಮಾಜಿ ಪ್ರಧಾನಿ ದೇವೇಗೌಡ ಸಮ್ಮುಖದಲ್ಲಿ ಬೆಂಗಳೂರಿನ ಜೆ.ಪಿ. ಭವನದ ಜೆಡಿಎಸ್ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ಶಾಂತಿ ಕಾಪಾಡುವ ಮತ್ತು ಕರ್ನಾಟವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಿಕೊಳ್ಳುವ ಸಾಮರ್ಥ್ಯ ಜೆಡಿಎಸ್‌ಗೆ ಮಾತ್ರವೇ ಇದೆ ಎಂದರು. ಬಿಜೆಪಿ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಎರಡೂ ರಾಷ್ಟಿçÃಯ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಾಗಿ ಕೆಲಸ ಮಾಡುತ್ತಿವೆ ಎಂದು ದೂರಿದರು.
ದೇಶದ್ರೋಹಿ ಲೇಖನ: ಬಂಧನ
ಶ್ರೀನಗರ, ಏ. ೧೭: ಆನ್‌ಲೈನ್ ನಿಯತಕಾಲಿಕೆಯೊಂದರಲ್ಲಿ ದೇಶದ್ರೋಹ ಲೇಖನ ಬರೆದಿದ್ದ, ಕಾಶ್ಮೀರ ವಿವಿಯ ಪಿಹೆಚ್‌ಡಿ ವಿದ್ವಾಂಸನನ್ನು ರಾಜ್ಯ ತನಿಖಾ ಸಂಸ್ಥೆ ಬಂಧಿಸಿದೆ. ಅಬ್ದುಲ್ ಅಲಾ ಫಜಿಲಿ ಬಂಧನಕ್ಕೊಳಗಾಗಿರುವ ಪಿಹೆಚ್‌ಡಿ ವಿದ್ವಾಂಸನಾಗಿದ್ದು, ರಾಷ್ಟç ವಿರೋಧಿ ಜಾಲ ಹಾಗೂ ಭಯೋತ್ಪಾದಕರನ್ನು ಹೆಡೆಮುರಿ ಕಟ್ಟುವ ಕಾರ್ಯಾಚರಣೆಯ ಭಾಗವಾಗಿ ಎಸ್‌ಐಎ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಯುಎಪಿಎ ಕಾಯ್ದೆಯಡಿ ದಾಖಲಾಗಿದ್ದ ಎಫ್‌ಐಆರ್ ಆಧಾರದಲ್ಲಿ ಎಸ್‌ಐಎ ಶೋಧ ಕಾರ್ಯಾಚರಣೆ ನಡೆಸಿತ್ತು. ಬಂಧನಕ್ಕೊಳಗಾಗಿರುವ ಫಾಜಿಲಿ ಜೊತೆಗೆ ದಿ ಕಾಶ್ಮೀರ್ ವಾಲ ಎಂಬ ಡಿಜಿಟಲ್ ನಿಯತಕಾಲಿಕೆಯ ಸಂಪಾದಕ ಹಾಗೂ ಇನ್ನಿತರರನ್ನು ಬಂಧಿಸಲಾಗಿದೆ. ಶೋಧ ಕಾರ್ಯಾಚರಣೆ ವೇಳೆ ಎಸ್‌ಐಎ ಕಂಪ್ಯೂಟರ್‌ನಲ್ಲಿದ್ದ ಪ್ರಮುಖ ಫೈಲ್‌ಗಳು, ಲ್ಯಾಪ್‌ಟಾಪ್ ಹಾಗೂ ಇನ್ನಿತರ ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.