ಶನಿವಾರಸಂತೆ, ಏ. ೧೭: ಶನಿವಾರಸಂತೆ ಸಮೀಪದ ದೊಡ್ಡಭಂಡಾರ ಗ್ರಾಮದಲ್ಲಿ ನೂತನವಾಗಿ ಸುಮಾರು ರೂ. ೩೬ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಮಲ್ಲೇಶ್ವರ ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ. ೨ ಲಕ್ಷ ನೆರವು ನೀಡಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ರೋಹಿತ್, ದೇವಸ್ಥಾನ ಸಮಿತಿ ಕಾರ್ಯದರ್ಶಿ ಡಿ.ವಿ. ಶೇಷೇಗೌಡ ಹಾಗೂ ಪದಾಧಿಕಾರಿಗಳಿಗೆ ರೂ. ೨ ಲಕ್ಷದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿ ಸದಸ್ಯರುಗಳಾದ ಡಿ.ಜೆ. ಶಿವರಾಂ, ಬಿ.ಎಂ. ಚಂದ್ರೇಗೌಡ, ಡಿ.ಎ. ಅಶೋಕ್, ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯ ಡಿ.ಆರ್. ಹರೀಶ್, ಧರ್ಮಸ್ಥಳ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.