ಮಡಿಕೇರಿ, ಏ. ೧೭: ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಗರದ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಸಂಘ ಪರಿವಾರದ ಷಡ್ಯಂತ್ರದಿAದ ದೇಶದಲ್ಲಿ ಕೋಮು ಸಂಘರ್ಷ ಸೃಷ್ಟಿಯಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭಾ ಸದಸ್ಯ ಅಮೀನ್ ಮೊಹ್ಸಿನ್ ಮಾತನಾಡಿ, ಶೋಷಿತ ಸಮಾಜದ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಸರಿಯಲ್ಲ. ಇದರಿಂದ ದೇಶದಲ್ಲಿ ಅರಾಜಕತೆಯಂತ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಸಂಘ ಪರಿವಾರದ ಪೂರ್ವನಿಯೋಜಿತ ಷಡ್ಯಂತ್ರದಿAದ ಕೋಮು ಗಲಭೆ ಉಂಟಾಗಿ ಸಾಮರಸ್ಯ ಹಾಳಾಗುತ್ತಿದೆ. ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಆರ್.ಎಸ್.ಎಸ್. ಕಾರಣವಾಗಿದೆ ಎಂದು ದೂರಿದ ಅವರು, ದೇಶದ ವಿವಿಧೆಡೆ ಮಸೀದಿ ಸುಟ್ಟು ಹಿಂಸಾಚಾರ ಸೃಷ್ಟಿಸುತ್ತಿರುವುದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಪಿ.ಎಫ್.ಐ. ಜಿಲ್ಲಾಧ್ಯಕ್ಷ ಶೌಕತ್ ಅಲಿ, ನಗರಾಧ್ಯಕ್ಷ ರಿಯಾಜ್, ಮಡಿಕೇರಿ ವಿಧಾನ ಸಭಾ ಅಧ್ಯಕ್ಷ ಉಸ್ಮಾನ್, ನಗರಸಭಾ ಸದಸ್ಯ ಮನ್ಸೂರ್ ಅಲಿ, ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಖಲೀಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.