ಬೆಂಗಳೂರು, ಏ. ೧೮: ವಿವಾಹ ನೋಂದಣಿ ಮಾಡುವ ಕಾರ್ಯವನ್ನು ಸರಕಾರ ಸರಳಗೊಳಿಸಿದ್ದು. ಇನ್ನು ಮುಂದೆ ಸಬ್ ರಿಜಿಸ್ಟಾçರ್ ಕಚೇರಿಗಳಿಗೆ ಅಲೆಯುವ ಅಗತ್ಯವನ್ನು ತಪ್ಪಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿವಾಹ ನೋಂದಣಿ ಸೇವೆ ಲಭ್ಯವಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಅಧಿಕಾರ ನೀಡಲಾಗಿದೆ.
ತಮ್ಮ ವಿವಾಹ ನೋಂದಣಿ ಮಾಡಿಕೊಳ್ಳದ ಜನರು ಇನ್ನುಮುಂದೆ ಪಂಚಾಯಿತಿಯಲ್ಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಸಂಬAಧ ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ, ಪಿಡಿಒಗಳಿಗೆ ವಿವಾಹ ನೋಂದಣಿಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ.
ಸರ್ಕಾರದ ಈ ತೀರ್ಮಾನದಿಂದಾಗಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿಯೇ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ಸಿಗಲಿದೆ. ಈ ಹಿಂದೆ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿರುವ ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟರ್) ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿ ಮಾಡಿಸಬೇಕಿತ್ತು.