ಮಡಿಕೇರಿ, ಏ. ೧೮: ಇಲ್ಲಿಗೆ ಸಮೀಪದ ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಮ್ಮೆತ್ತಾಳು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ೩೨ನೇ ವರ್ಷದ ವಾರ್ಷಿಕೋತ್ಸವ ತಾ.೧೯ ರಂದು (ಇಂದು) ನಡೆಯಲಿದೆ. ಬೆಳಿಗ್ಗೆ ೧೦.೩೦ ಗಂಟೆಯಿAದಲೇ ಹೋಮ, ಪೂಜಾ ಕಾರ್ಯಗಳು ನೆರವೇರಲಿದ್ದು, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ನೆರವೇರಲಿದೆ.
ಕಟ್ಟಡ ಉದ್ಘಾಟನೆ: ದೇವಾಲಯ ಸಮಿತಿ ಸದಸ್ಯರುಗಳ ಧನ ಸಹಾಯದೊಂದಿಗೆ ನಿರ್ಮಿಸಲಾಗಿರುವ ನೂತನ ಕಟ್ಟಡದ ಉದ್ಘಾಟನೆ ಬೆಳಿಗ್ಗೆ ೧೦.೩೦ಗಂಟೆಗೆ ನಡೆಯಲಿದೆ ಎಂದು ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ಅಧ್ಯಕ್ಷೆ ಉಷಾ ಜೀವನ್ ಹಾಗೂ ಕಾರ್ಯದರ್ಶಿ ಗಿರೀಶ ತಿಳಿಸಿದ್ದಾರೆ.