ಕೂಡಿಗೆ, ಏ. ೧೯: ಸೋಮವಾರಪೇಟೆ ತಾಲೂಕು ಮತ್ತು ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಕೂಡಿಗೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಆಯಾ ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಸಮಗ್ರವಾದ ವರದಿಗಳ ಬಗ್ಗೆ ಚರ್ಚೆಗಳು ನಡೆದವು. ಅಲ್ಲದೆ ಮಳೆಗಾಲ ಆರಂಭವಾಗುವ ಮುನ್ನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸುವುದು, ಮತ್ತು ಅವುಗಳನ್ನು ಅಭಿವೃದ್ಧಿ ಪಡಿಸಿ ನೀರು ಸಂಗ್ರಹ ಮಾಡುವ ಬಗ್ಗೆ ಸಮಗ್ರವಾದ ಚರ್ಚೆಗಳು ನಡೆದವು.
ಸಭೆಯಲ್ಲಿ ಅಂರ್ತಜಲ ಹೆಚ್ಚಿಸಲು ಬೇಕಾಗುವ ಹೊಸ ಯೋಜನೆಗಳ ಕ್ರಿಯಾ ಯೋಜನೆಗಳಲ್ಲಿ, ಮತ್ತು ಕೆರೆಗಳ ಹೂಳು ತೆಗೆಯುವಿಕೆ ಸೇರಿದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೈಗೊಳ್ಳಲಾಗುವ ವಿವಿಧ ಕಾಮಗಾರಿಗಳ ವಿಷಯಗಳ ಬಗ್ಗೆಯೂ ಚರ್ಚಿಸಲಾಯಿತು. ಈ ಕಾರ್ಯಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಭಂವರ್ ಸಿಂಗ್ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷಿö್ಮ ಅವರು ಸರಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾತನಾಡಿದರು. ಈ ಸಂದರ್ಭ ಸೋಮವಾರಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಸೇರಿದಂತೆ ಎರಡು ತಾಲೂಕುಗಳ ೪೧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.